ಬಳ್ಳಾರಿಗೆ ಜನಾರ್ದನ ರೆಡ್ಡಿ ಪ್ರವೇಶ : ಬಿಜೆಪಿಗೆ ವರವಾಗಲಿದೆಯೇ ಸಂಡೂರು ಉಪ ಚುನಾವಣೆ?

Date:

ರಾಜ್ಯದಲ್ಲಿ ಲೋಕಸಭೆ ಚುನಾವಣೆ 2024ರ ಬಳಿಕ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಒಂದಾಗಿದೆ. ಉಪಚುನಾವಣೆ ಚರ್ಚೆಯ ನಡುವೆಯೇ ಜನಾರ್ದನ ರೆಡ್ಡಿ ಅವರಿಗೆ ಈ ವರೆಗೆ ಬಳ್ಳಾರಿ ಪ್ರವೇಶಕ್ಕೆ ವಿಧಿಸಲಾಗಿದ್ದ ತಡೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಮುಕ್ತವಾಗಿ ಪ್ರವೇಶಿಸಬಹುದು ಎಂದು ಅಂತಿಮ ತೀರ್ಪು ನೀಡಿದೆ. ಈ ನಡುವೆ ಕಾಂಗ್ರೆಸ್ ಭದ್ರಕೋಟೆಗೆ ರೆಡ್ಡಿ ಪ್ರವೇಶದಿಂದಾಗಿ ಮತ್ತೆ ಬಿಜೆಪಿ ಪಾಲಾಗಲಿದೆಯಾ ಎಂಬ ಅನುಮಾನ ಕಾಡತೊಡಗಿದೆ.

ಅಕ್ರಮ ಗಣಿಗಾರಿಕೆ ಆರೋಪದಲ್ಲಿ 2011ರ ಸೆ. 5 ರಂದು ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಜನಾರ್ದನ ರೆಡ್ಡಿ, 2015ರಲ್ಲಿ ಷರತ್ತುಬದ್ಧ ಜಾಮೀನು ಪಡೆದು ಹೊರ ಬಂದಿದ್ದರು. ಆದರೆ, ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿತ್ತು.

ಈ ಮಧ್ಯೆ ಮಗಳ ಮದುವೆ, ಹೆರಿಗೆ, ಮೊಮ್ಮಗಳ ನಾಮಕರಣ ಸೇರಿದಂತೆ ಇತರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾಲ್ಕೈದು ಬಾರಿ ಕೋರ್ಟ್ ಅನುಮತಿಯೊಂದಿಗೆ ಅವರು ಬಳ್ಳಾರಿಗೆ ಬಂದಿದ್ದರು. ಸದ್ಯ ಅವರು ಬಳ್ಳಾರಿ ಪ್ರವೇಶಿಸಲು ಇದ್ದ ಎಲ್ಲ ಷರತ್ತುಗಳನ್ನೂ ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಖಾಯಂ ಉಳಿಯಲು ಅವಕಾಶ ನೀಡಿರುವುದು ಅವರ ರೆಡ್ಡಿ ಬೆಂಬಲಿಗರಲ್ಲಿ ಹರ್ಷ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ಚುನಾವಣೆಯಲ್ಲಿ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸಮಯದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಹೀನಾಯ ಸೋಲಾಗಿರುವುದು ಬಿಜೆಪಿ ನಾಯಕರಲ್ಲಿ ಅತ್ಯಂತ ಬೇಸರ ತಂದಿದೆ. ಜನಾರ್ದನ ರೆಡ್ಡಿಗೆ ಬಳ್ಳಾರಿ ಮುಕ್ತ ಪ್ರವೇಶ ಎಂದು ಮಹತ್ತರ ವಾದ ತೀರ್ಪಿನಿಂದ ಸಂಡೂರು ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಗೆಲುವುದಕ್ಕೆ ಕೆಲಸ ಮಾಡಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

ರೆಡ್ಡಿ 1
ಸುಪ್ರೀಂ ಕೋರ್ಟ್‌ ಆದೇಶದ ಬೆನ್ನಲ್ಲಿ ಸಂಭ್ರಮಿಸಿದ್ದ ರೆಡ್ಡಿ ಬೆಂಬಲಿಗರು

ರೆಡ್ಡಿ ಆಗಮನದಿಂದ ಈ ಬಾರಿ ಭದ್ರಕೋಟೆಯಾಗಿರುವ ಸಂಡೂರಿನಲ್ಲಿ ಕಾಂಗ್ರೆಸ್‌ಗೆ ಸೋಲಾಗಲಿದೆಯಾ? ಬಿಜೆಪಿ ಗೆಲುವು ಸಾಧಿಸಲಿದೆಯೇ ಎಂಬ ಮಾತು, ಚರ್ಚೆಗಳಲ್ಲಿ ಜನರು ತೊಡಗಿಸಿಕೊಂಡಿದ್ದಾರೆ.

2023 ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಲ್ಲಿ ಶಿಲ್ಪಾ ರಾಘವೇಂದ್ರ ಬಿಜೆಪಿಯ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ ಅವರು 49,701 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕಾಂಗ್ರೆಸ್‌ನ ಇ. ತುಕಾರಾಂ 85,223 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಳಿಕ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿ, ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ತೆರವಾದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ಸಂಡೂರು ಕ್ಷೇತ್ರದಲ್ಲಿ ಹಾಲಿ ಸಂಸದ ತುಕಾರಾಂ ಸತತ ನಾಲ್ಕು ಬಾರಿ ಗೆದ್ದು, ‘ಹ್ಯಾಟ್ರಿಕ್ ಹೀರೊ’ ಆಗಿದ್ದಾರೆ. ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಐದು ಕ್ಷೇತ್ರಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.

ಜನ

ಸಂಡೂರು ಕ್ಷೇತಕ್ಕೆ ಘಟಾನುಘಟಿ ಅಮಿತ್ ಶಾ ಅವರಂತಹ ಹಿರಿಯ ರಾಜಕಾರಣಿ ವ್ಯಕ್ತಿಗಳು ಬಂದರೂ ಕೂಡ ಬಿಜೆಪಿ ಗೆಲ್ಲಿಸುವುದಕ್ಕೆ ಆಗಿರಲಿಲ್ಲ. ಈ ಬಾರಿ ರೆಡ್ಡಿ ಪ್ರವೇಶದಿಂದ ಸಂಡೂರಿನಲ್ಲಿ ಗೆಲುವು ಆಗಲಿದೆ ಎಂದು ಕೇಳಿ ಬರುತ್ತಿದೆಯಾದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದರಿಂದ ಅಷ್ಟು ಸುಲಭವಿಲ್ಲ ಎಂಬ ಮಾತುಗಳು ಕೂಡ ಜನರ ನಡುವೆ ಚರ್ಚೆಯಲ್ಲಿದೆ.

ಇದನ್ನು ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಸಂಡೂರು ಉಪ ಚುನಾವಣೆಯ ದಿನದಿಂದ ದಿನಕ್ಕೆ ಹಿರಿಯ ಮುಖಂಡರು, ಕಾರ್ಯಕರ್ತರು, ತಳಮಟ್ಟದಲ್ಲಿ ಚುರುಕಾಗಿ ಕೆಲಸ ಕಾರ್ಯ ತೊಡಗಿಸಿಕೊಂಡಿದ್ದಾರೆ. ಅಭ್ಯರ್ಥಿ ಯಾರು ಅಂತ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಇನ್ನೂ ಅಂತಿಮವಾಗಿಲ್ಲ. ಹೀಗಾಗಿ, ಸಂಡೂರು ಕ್ಷೇತ್ರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಬಾರಿಯ ಉಪಚುನಾವಣೆಯ ವೇಳೆಯಲ್ಲಿಯೇ ಕಾಂಗ್ರೆಸ್ ಭದ್ರಕೋಟೆಗೆ ಜನಾರ್ದನ ರೆಡ್ಡಿ ಪ್ರವೇಶದಿಂದಾಗಿ ಏನಾದರೂ ಬದಲಾವಣೆ ಆಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...