ಜವಾಹರ್ ಲಾಲ್ ನೆಹರೂ ಮಹಾನ್ ಪ್ರಜಾಪ್ರಭುತ್ವವಾದಿ: ಸಿಎಂ ಸಿದ್ದರಾಮಯ್ಯ

Date:

  • ನೆಹರೂ ಅವರ 59ನೇ ಪುಣ್ಯತಿಥಿ; ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ
  • ಸ್ವತಂತ್ರ ಭಾರತವನ್ನು ಆಧುನಿಕಗೊಳಿಸಲು ನೆಹರೂ ಪ್ರಮುಖ ಪಾತ್ರ ವಹಿಸಿದ್ದರು

ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಮಹಾನ್ ಪ್ರಜಾಪ್ರಭುತ್ವವಾದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಶನಿವಾರ ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

“ಜವಾಹರಲಾಲ್ ನೆಹರೂ ಅವರು ಈ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲನೇ ಪ್ರಧಾನಿಯಾಗಿ 17 ವರ್ಷಗಳ ಕಾಲ ಸ್ವತಂತ್ರ ಭಾರತವನ್ನು ಆಧುನಿಕಗೊಳಿಸಲು ಪ್ರಮುಖ ಪಾತ್ರ ವಹಿಸಿದ್ದರು. ಅದಕ್ಕಾಗಿಯೇ ಆಧುನಿಕ ಭಾರತ ನಿರ್ಮಾತೃ ಎಂದು ಕರೆಯುತ್ತೇವೆ. ಬ್ರಿಟಿಷರು ದೇಶವನ್ನು ಲೂಟಿ ಮಾಡಿ ಬಿಟ್ಟು ಹೋಗಿದ್ದ ದೇಶವನ್ನು ಪ್ರಧಾನಿಗಳಾಗಿ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದರು. ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆಗೊಂಡಿದ್ದರೆ, ಸಾರ್ವಭೌಮತ್ವ ಉಳಿದಿದ್ದರೆ ಅದಕ್ಕೆ ಜವಾಹರಲಾಲ್ ನೆಹರೂ ಅವರು ಕಾರಣ. ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧುನಿಕತೆಯ ಅಡಿಪಾಯ

ನೆಹರೂ ಹಾಕಿದ ಅಡಿಪಾಯದ ಮೇಲೆಯೇ ಅಭಿವೃದ್ಧಿ ಕಾರ್ಯವನ್ನು ಮುಂದುವರೆಸುವ ಕೆಲಸವನ್ನು ಮಾಡುತ್ತೇವೆ. ಈ ದೇಶಕ್ಕೆ ಪ್ರಜಾಪ್ರಭುತ್ವ, ಅಭಿವೃದ್ಧಿ, ಆಧುನಿಕತೆಯ ಅಡಿಪಾಯ ಹಾಕಿದವರು ನೆಹರೂ. ಸ್ವಾತಂತ್ರ್ಯ ಹೋರಾಟದಲ್ಲಿ, ಸುಭಾಶ್ ಚಂದ್ರ ಬೋಸ್, ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಚಂದ್ರಶೇಖರ್ ಆಜಾದ್, ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳು ಮಹಾತ್ಮಗಾಂಧಿ ಅವರೊಂದಿಗೆ ಅಪಾರವಾಗಿ ತೊಡಗಿಸಿಕೊಂಡಿದ್ದರು. ನೆಹರು ಅವರು ಸುಮಾರು ಒಂಭತ್ತು ವರ್ಷಗಳ ಕಾಲ ಜೈಲು ವಾಸವನ್ನೂ ಅನುಭವಿಸಿದ್ದರು. ದೇಶದ ಸ್ವಾತಂತ್ರ್ಯ, ಅಭಿವೃದ್ಧಿಗಾಗಿ ಅಪಾರ ತ್ಯಾಗ, ಬಲಿದಾನಗಳನ್ನು ಮಾಡಿದ ಕುಟುಂಬ ಅವರದ್ದು ಎಂದು ತಿಳಿಸಿದರು.

ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು

ನೆಹರೂ ಅವರ ಬಗ್ಗೆ ಈಗ ಟೀಕೆಗಳನ್ನು ಮಾಡುತ್ತಾರೆ. ಆದರೆ ಅವರು ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನಗಳನ್ನು ನಾವು ಸ್ಮರಿಸಬೇಕು. ಅದು ನಮ್ಮೆಲರಿಗೂ ಸ್ಫೂರ್ತಿ. ಮಹಾನ್ ವ್ಯಕ್ತಿಯ ಪುಣ್ಯ ಸ್ಮರಣೆಯಂದು ಅವರನ್ನು ಸ್ಮರಿಸುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...