ಉಡುಪಿ | ಹಿಂದೂ ಸಂಗಮದಲ್ಲಿ ಅಂಬೇಡ್ಕರ್‌ಚಿತ್ರ : ಜಯನ್ ಮಲ್ಪೆ ಆಕ್ಷೇಪ

Date:

ಧಾರ್ಮಿಕತೆಯೆಂದ ಜಾತಿಯತೆಯನ್ನು ಭೋಧಿಸುವ, ಕುಡಿಯಲೂ ನೀರು ಕೊಡದ, ಕೊನೇಪಕ್ಷ ದೇವರನ್ನೂ ನೋಡಲು ಬಿಡದ ಹಿಂದೂ ಧರ್ಮ ಧರ್ಮವೇ ಅಲ್ಲ ಎಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಹೇಳಿದ್ದರೂ, ಅಂಬೇಡ್ಕರ್‌ರವರ ಭಾವಚಿತ್ರವನ್ನು ಬಳಸುತ್ತಿರವ ಬಗ್ಗೆ ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಆಕ್ಷೇಪಿಸಿದ್ದಾರೆ.

ಉಡುಪಿ ಜಿಲ್ಲೆಯ ಹಲವು ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಹಿಂದೂ ಸಂಗಮದ ಹೆಸರಿನಲ್ಲಿ ನಡೆಯುವ ಸಮಾಜ್ಯೋತ್ಸವದ ಬ್ಯಾನರ್, ಹಾಗೂ ಕಟಾಟ್‌ಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಬಳಸಲಾಗುತ್ತಿದೆ.

1956ರ ಅಕ್ಟೋಬರ್ 14ರಂದು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಹಿಂದೂ ಧರ್ಮ ಬಿಟ್ಟು ಬೌದ್ಧ ಧರ್ಮವನ್ನು ಸ್ವೀಕರಿಸುವ ಮೊದಲೇ 1935ರ ಅಕ್ಟೋಬರ್ 13ರಂದು ನಾನು ಹಿಂದೂವಾಗಿ ಹುಟ್ಟಿದ್ದರೂ ಹಿಂದೂವಾಗಿಯೇ ಸಾಯಲಾರೆ ಎಂದು ಫೋಷಿಸಿದ್ದರು. ಈ ವಾಸ್ತವ ವಿಚಾರ ಗೊತ್ತಿದ್ದರೂ ಅವರಿಗೆ ಅವಮಾನಮಾಡುವ ಉದ್ದೇಶದಿಂದ ಹಿಂದೂ ಸಮಾಜ್ಯೋತ್ಸವದಲ್ಲಿ ಅವರ ಭಾವಚಿತ್ರ ಬಳಸುವುದು ಖಂಡನೀಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಧರ್ಮಾಂತರ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಒಟ್ಟು ಇಪ್ಪತ್ತೆರಡು ಪ್ರತಿಜ್ಞೆಗಳನ್ನು ಸ್ವೀಕರಿಸಿದ್ದರು. ಹಿಂದೂ ದೇವರು ದಿಂಡರು, ದೈವದ ಕಲ್ಪನೆ, ಹಿಂದೂ ಸೃಷ್ಟಿ, ಬ್ರಾಹ್ಮಣರ ಪೌರೋಹಿತ್ಯ ಹೀಗೆ ಹಿಂದೂ ಧರ್ಮದ ಅವಿಭಾಜ್ಯ ಅಂಗವಾಗಿರುವ ಈ ಸಂಸ್ಕಾರಗಳನ್ನು ಬಿಡುತ್ತೇವೆಂದು ಅವರು ಪ್ರತಿಜ್ಞೆ ತೆಗೆದುಕೊಂಡಿದ್ದರು.

ಇದಲ್ಲದೆ ಅಂಬೇಡ್ಕರ್ ಬರೆದ ಹಿಂದೂ ಧರ್ಮದಲ್ಲಿನ ಒಗಟುಗಳು ಪುಸ್ತಕದಲ್ಲಿ ರಾಮ ಮತ್ತು ಕೃಷ್ಣನ ಜಾಥಾಕವನ್ನು ಬಟ್ಟಾ ಬಯಲುಗೊಳಿಸಿದ್ದಾರೆ ಎಂದಿರುವ ಜಯನ್ ಮಲ್ಪೆ ಅಸ್ಪೃಶ್ಯತಾ ಸಮಸ್ಯೆ ಹಿಂದೂ ಮತ್ತು ದಲಿತರ ನಡುವಿನ ಸಂಘರ್ಷವಾಗಿದೆ. ಹಿಂದೂಗಳ ಮುಂದೆ ಮಂಡಿಯೂರಿ ಜಾತಿಪದ್ದತಿಯನ್ನು ಒಪ್ಪಕೊಳ್ಳುವ ಬದಲು ದಲಿತರು ಸ್ವಾಭಿಮಾನದಿಂದ ಶಕ್ತಿಶಾಲಿಯಾಗಿ ಇದರ ವಿರುದ್ಧ ಹೋರಾಟದಲ್ಲಿ ಜಯಗಳಿಸಬೇಕು ಎಂದಿದ್ದಾರೆ.

ದಲಿತ ಸಮಾಜವನ್ನು ಮತ್ತು ಅಂಬೇಡ್ಕರನ್ನು ಉದ್ದೇಶಪೂರ್ವಕವಾಗಿ ಅವಮಾನಮಾಡುವ ಹಿಂದೂ ಸಮಾಜ್ಯೋತ್ಸವದ ಸಂಘಟಕರ ವಿರುದ್ಧ ಕಠಿಣ ಕಾನೂನುಕ್ರಮ ಕೈಗೊಳ್ಳುವಂತೆ ಜಯನ್ ಮಲ್ಪೆ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...