ಕಲಬುರಗಿ | ಗ್ರಾಮ ಪಂ. ಅಧ್ಯಕ್ಷ ಸ್ಥಾನಕ್ಕೆ ದಲಿತರು ಸ್ಪರ್ಧಿಸದಂತೆ ಜೀವ ಬೆದರಿಕೆ; ಆರೋಪ

Date:

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು (ಗುರುವಾರ) ಚುನಾವಣೆ ನಡೆಯುತ್ತಿದೆ. ಆದರೆ, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದಲಿತರು ಸ್ಪರ್ಧಿಸಬಾರದೆಂದು ಪ್ರಬಲ ಜಾತಿಯವರು ಬೆದರಿಕೆ ಹಾಕಿದ್ದಾರೆ ದಲಿತರಿಗೆ ರಕ್ಷಣೆ ಕೊಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರು ಬುಧವಾರ ರಾತ್ರಿ ಜೇವರ್ಗಿ ಪೊಲೀಸ್‌ ಠಾಣೆಯ ಸಿಸಿಪಿಐಗೆ ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಹಿರಿಯ ದಲಿತ ಮುಖಂಡ ಭೀಮರಾಯ ನಗನೂರ್ ಮಾತನಾಡಿ, “ಅರಳಗುಂಡಗಿ ಗ್ರಾಮದ ಶರಣಗೌಡ, ಹಿರೇಗೌಡ, ಶಿವಣಗೌಡ ಪೊಲೀಸ್ ಪಾಟೀಲ, ಮತ್ತು ದೇವಪ್ಪ ಪೂಜಾರಿ ಎಂಬವರು ಸ್ವಪ್ನ ಅವರ ಮನೆಗೆ ನುಗ್ಗಿ, ಜಾತಿ ನಿಂದನೆ ಮಾಡಿ, ಅವಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ. ಸಂವಿಧಾನದ ಅಡಿಯಲ್ಲಿನ ರಾಜಕೀಯ ಹಕ್ಕು ಪಡೆದುಕೊಳ್ಳಲು ಗ್ರಾಮ ಪಂಚಾಯತಿಯ ಹಲವಾರು ಸದಸ್ಯರು ಮತ್ತು ಗ್ರಾಮದ ಪ್ರಮುಖ ಮುಖಂಡರ ಬೆಂಬಲ ಸಹಕಾರ, ಒಪ್ಪಿಗೆ ಮೇಲೆ ಅಧ್ಯಕ್ಷ ಸ್ನಾನಕ್ಕೆ ಸ್ವಪ್ನ ಅವರು ಸ್ಪರ್ಧಿಸಿದ್ದಾರೆ. ಅದರೆ, ಅದನ್ನು ಸಹಿಸದ ಪ್ರಬಲ ಜಾತಿಯ ಕೆಲವರು ಬೆದರಿಕೆ ಹಾಕಿದ್ದಾರೆ” ಎಂದು ದೂರಿದ್ದಾರೆ.

“ಬೆದರಿಕೆ ಬಗ್ಗೆ ಯಡ್ರಾಮಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಲು ಹೋದರೆ, ಅಲ್ಲಿನ ಪಿಎಸ್‌ಐ ದೂರು ದಾಖಲಿಸಿಕೊಂಡಿಲ್ಲ. ಪೊಲೀಸರೇ ದಲಿತರಿಗೆ ರಕ್ಷಣೆ ನೀಡದಿದ್ದರೆ, ಶೋಷಿತರು ನ್ಯಾಯಕ್ಕಾಗಿ ಎಲ್ಲಿಗೆ ಹೋಗಬೇಕು. ಯಡ್ರಾಪಿ ಪಿಎಸ್‌ಐ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರುಗಳಾದ. ಸಿದ್ದರಾಮ ಕಟ್ಟಿ.ಶ್ರೀ ಹರಿ ಕರಕಹಳ್ಳಿ. ಸಿದ್ದು ಕೆರೂರ.ಶರಣಬಸಪ್ಪ ಲೆನ್ನಾಪೂರ.ಮಹೇಶ ಕೋಕಿಲೆ.ಸಂಗಣ್ಣ ಹೊಸಮನಿ.
ಲಕ್ಷ್ಮಣ ಡೊಳ್ಳೆ ಇತರರು ಇದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...