ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಉದ್ಯೋಗ ಖಾಲಿಯಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರವಾರ ತಾಲೂಕು ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಆರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸೂಕ್ತ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಆಗಸ್ಟ್ 30ರೊಳಗೆ ಕಾರವಾರದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ, ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕಂಪ್ಯೂಟರ್ ಜ್ಞಾನ, ಕೃಷಿ ಪದವಿಯೊಂದಿಗೆ 5 ವರ್ಷ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹಾಗೂ 2 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವವುಳ್ಳವರಾಗಿರಬೇಕು.
ಈ ಸುದ್ದಿ ಓದಿದ್ದೀರಾ? ಮಂಗಳೂರು | ವೆನ್ಲಾಕ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಬಗ್ಗಿ ಸೌಲಭ್ಯ ಒದಗಿಸಿದ ಐವನ್ ಡಿಸೋಜಾ
ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ, ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಹಾಗೂ 1 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವವುಳ್ಳವರಾಗಿರಬೇಕು.
ಈ ಹುದ್ದೆಗಳು ಕೃಷಿ ಇಲಾಖಾ ಮಾರ್ಗಸೂಚಿ ಹಾಗೂ ಆತ್ಮ ಯೋಜನೆಯ ಎಲ್ಲ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ದೂ.ಸಂ: 8884023050 ಅಥವಾ ಇ ಮೇಲ್ ವಿಳಾಸ: jdauttarkannada1@gmail.comಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





