ಉದ್ಯೋಗ ಮಾಹಿತಿ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅಂಚೆ ಇಲಾಖೆಯಿಂದ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜ.28 ಕೊನೆಯ ದಿನ

Date:

ಭಾರತೀಯ ಅಂಚೆ ಇಲಾಖೆಯಿಂದ ಬೃಹತ್ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಖಾಲಿಯಿರುವ ಸಾವಿರಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ.

ಭಾರತೀಯ ಅಂಚೆ ಕಚೇರಿಗಳಲ್ಲಿ ಬಹುಕಾರ್ಯ ಸಿಬ್ಬಂದಿ(ಎಂಟಿಎಸ್)‌ ಹುದ್ದೆಗೆ 18,200 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿವಿಧ ವಿಭಾಗಗಳಲ್ಲಿ ಈ ಹುದ್ದೆಗಳು ಖಾಲಿಯಿವೆ. ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.

ಅರ್ಜಿ ಸಲ್ಲಿಕೆಗೂ ಮೊದಲು ಅಭ್ಯರ್ಥಿಗಳ ವಯೋಮಿತಿ, ಮಾಸಿಕ ವೇತನ, ಆರ್ಜಿ ಸಲ್ಲಿಕೆ ಕೊನೆಯ ದಿನಾಂಕ, ವಿದ್ಯಾರ್ಹತೆ, ನೇಮಕಾತಿಯ ಪ್ರಮುಖ ಮಾಹಿತಿ ನೋಡುವುದಾದರೆ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ

ಹುದ್ದೆ ಹೆಸರು: ಬಹುಕಾರ್ಯ ಸಿಬ್ಬಂದಿ(ಎಂಟಿಎಸ್‌)

ಒಟ್ಟು ಹುದ್ದೆಗಳು: 18,200 ಹುದ್ದೆಗಳು

ಪೋಸ್ಟಿಂಗ್: ಭಾರತ

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಜನವರಿ 28

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಶೈಕ್ಷಣಿಕ ಅರ್ಹತೆ : ಈ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು. ಸ್ಥಳೀಯ ಭಾಷೆ ಗೊತ್ತಿರುವ ಜೊತೆಗೆ ಕನಿಷ್ಠ ಕಂಪ್ಯೂಟರ್ ಜ್ಞಾನ ಇರಬೇಕು.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು

  • ಅಭ್ಯರ್ಥಿಗಳ SSLC ಅಂಕಪಟ್ಟಿ, ಪ್ರವೇಶ ಪತ್ರ
  • ಪಾಸಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ
  • ಆಧಾರ್ ಗುರುತಿನ ಚೀಟಿ
  • ಜಾತಿ ಪ್ರಮಾಣ ಪತ್ರ
  • ಜನ್ಮ ಪ್ರಮಾಣ ಪತ್ರ

ವಯಸ್ಸಿನ ಮಿತಿ
ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾದ ಮಾಹಿತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 18 ಹಾಗೂ ಗರಿಷ್ಠ 25 ವರ್ಷಗಳಾಗಿರಬೇಕು. ಜಾತಿ ಆಧಾರದಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ಸಿಗಬಹುದು.

ಆಯ್ಕೆ ಪ್ರಕ್ರಿಯೆ- ಮಾಸಿಕ ವೇತನ ಎಷ್ಟು?
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾಗುವವರಿಗೆ ಮಾಸಿಕವಾಗಿ ₹15,000ದಿಂದ ₹29,380ರವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ, ವಿಧಾನ ತಿಳಿಯಿರಿ
ಅಭ್ಯರ್ಥಿಗಳು ಜನವರಿ 28ರೊಳಗೆ ಅಂಚೆ ಇಲಾಖೆ ಅಧಿಕೃತ ಜಾಲತಾಣ https://www.indiapost.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಈ ಮೂಲಕ ನೋಂದಾಯಿಸಿಕೊಂಡು ಅಗತ್ಯ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿಕೊಳ್ಳಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...