ಜೋಯಿಡಾ | ಜಗಲಬೇಟ ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ಕಾಡುಕೋಣ ಬಲಿ; ಗ್ರಾಮಸ್ಥರಲ್ಲಿ ಮನೆಮಾಡಿದ ಭೀತಿ

Date:

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಜಗಲಬೇಟ ಗ್ರಾಮ ಪಂಚಾಯತ್ ವ್ಯಾಪ್ತಿಯ ವೈನಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಯಿಂದಾಗಿ ಕಾಡುಕೋಣವೊಂದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಜಗಲಬೇಟ–ವೈನಿ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಕಾಡಿನಲ್ಲಿ ಕಾಡುಕೋಣದ ಕೊಳೆತ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯು ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಸ್ಥಳೀಯರಿಂದ ಲಭ್ಯವಾದ ಮಾಹಿತಿಯ ಪ್ರಕಾರ, ಈ ಕಾಡುಕೋಣವು ಸುಮಾರು ನಾಲ್ಕು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.

ಮೃತದೇಹವು ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುರಿಗಾಹಿಗಳು ಹಾಗೂ ಗ್ರಾಮಸ್ಥರು ಕಾಡಿನತ್ತ ತೆರಳಿದ್ದ ವೇಳೆ ಕಾಡುಕೋಣದ ಶವವನ್ನು ಗಮನಿಸಿದ್ದು, ತಕ್ಷಣವೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಡುಕೋಣದ ದೇಹದ ಮೇಲೆ ಆಳವಾದ ಗಾಯಗಳು ಹಾಗೂ ಕಚ್ಚಿದ ಗುರುತುಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಇದನ್ನು ಹುಲಿಯೇ ದಾಳಿ ಮಾಡಿ ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಹುಲಿ ಸಂಚರಿಸುತ್ತಿರುವ ಸಾಧ್ಯತೆ ಇರುವುದರಿಂದ ವೈನಿ ಹಾಗೂ ಜಗಲಬೇಟ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ವಿಶೇಷವಾಗಿ ಕಾಡಿನ ಅಂಚಿನ ಪ್ರದೇಶಗಳಲ್ಲಿ ಕೃಷಿ ಕೆಲಸಕ್ಕೆ ತೆರಳುವ ರೈತರು ಹಾಗೂ ಜಾನುವಾರುಗಳನ್ನು ಮೇಯಿಸಲು ಹೋಗುವ ಕುರಿಗಾಹಿಗಳು ತೀವ್ರ ಭೀತಿಗೊಳಗಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಹಾವಳಿ ಮತ್ತು ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ನಾಗರಿಕರು ಆರೋಪಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಸೋಶಿಯಲ್ ಮೀಡಿಯಾ ಟ್ರೋಲ್ ಎಫೆಕ್ಟ್: ಪಿಕಳೆ ನರ್ಸಿಂಗ್ ಹೋಂನ ರಾಜು ಪಿಕಳೆ ಆತ್ಮಹತ್ಯೆ

ಅರಣ್ಯ ಇಲಾಖೆಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಹುಲಿ ಚಲನವಲನದ ಬಗ್ಗೆ ತೀವ್ರ ನಿಗಾ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಅಲ್ಲದೆ, ಗಸ್ತು ಕಾರ್ಯವನ್ನು ಚುರುಕುಗೊಳಿಸಿ ಗ್ರಾಮಸ್ಥರಿಗೆ ಸೂಕ್ತ ಮುನ್ನೆಚ್ಚರಿಕೆಗಳನ್ನು ನೀಡಬೇಕೆಂದು ವಿನಂತಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅರಣ್ಯ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಬೇಕು ಹಾಗೂ ಒಂಟಿಯಾಗಿ ಸಂಚರಿಸದೆ ಗುಂಪಾಗಿ ತೆರಳಬೇಕೆಂದು ಸ್ಥಳೀಯ ಹಿರಿಯರು ಸಲಹೆ ನೀಡಿದ್ದಾರೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜನರ ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...