ಮೈಸೂರು | ಪತ್ರಿಕೋದ್ಯಮ ಸಮಾಜದ ಆಧಾರ ಸ್ತಂಭ: ಡಾ ವಿ ಷಣ್ಮುಗಂ

Date:

ಮೈಸೂರು ಮಹಾರಾಜ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ರೂಸಾ 2.0 ಯೋಜನೆಯ ಅಡಿಯಲ್ಲಿ ‘ವೃತ್ತಿ ಅವಕಾಶಗಳು ಮತ್ತು ಉದ್ಯೋಗಾರ್ಹತಾ ಕೌಶಲ್ಯಗಳು’ ವಿಷಯ ಕುರಿತು ಕಾಲೇಜಿನ ಜ್ಯೂನಿಯರ್ ಬಿಎ ಹಾಲ್ ನಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ಪ್ರಾಂಶುಪಾಲ ಪ್ರೊ.ವಿ. ಷಣ್ಮುಗಂ ‘ಪತ್ರಿಕೋಧ್ಯಮ ಸಮಾಜದ ಆಧಾರ ಸ್ತಂಭ’ ಎಂದು ಬಣ್ಣಿಸಿದರು.

ಭಾಷೆಯ ಮೇಲೆ ದೃಢವಾದ ಹಿಡಿತ ಮತ್ತು ಕೌಶಲ್ಯಾಭಿವೃದ್ಧಿ ವಿದ್ಯಾರ್ಥಿಗಳ ವೃತ್ತಿಜೀವನದಲ್ಲಿ ಯಶಸ್ಸಿನ ಪ್ರಮುಖ ಅಂಶಗಳಾಗಿವೆ. ಪತ್ರಿಕೋದ್ಯಮವು ಸಮಾಜದ ದಿಕ್ಕನ್ನು ರೂಪಿಸುವ ಶಕ್ತಿಯುತ ಮಾಧ್ಯಮವಾಗಿದ್ದು, ಉತ್ತಮ ಪತ್ರಿಕೆ ಜನಮನವನ್ನು ಸೆಳೆಯುವ ಮೂಲಕ ಸಮಾಜವನ್ನು ಸಕಾರಾತ್ಮಕವಾಗಿ ರೂಪಿಸುತ್ತದೆ. ಸುಳ್ಳು ಅಥವಾ ದಾರಿತಪ್ಪಿಸುವ ಮಾಹಿತಿಯನ್ನು ನೀಡುವ ಪತ್ರಿಕೆ ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ, ಜವಾಬ್ದಾರಿಯುತ ಪತ್ರಿಕೋದ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದೆ ಎಂದು ಅಭಿಪ್ರಾಯಪಟ್ಟರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಸಂವಹನ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯಕ. ಅದು ವ್ಯಕ್ತಿತ್ವ ವಿಕಾಸಕ್ಕೂ ದಾರಿಯಾಗುತ್ತದೆ. ವೃತ್ತಿ ಕೌಶಲ್ಯಗಳನ್ನು ಓದಿನ ಹಂತದಲ್ಲೇ ಕರಗತ ಮಾಡಿಕೊಳ್ಳಬೇಕು. ಪತ್ರಿಕೋದ್ಯಮ ಸಂವಿಧಾನದ ನಾಲ್ಕನೇ ಅಂಗವಾಗಿದ್ದು, ಜವಾಬ್ದಾರಿಯುತ ಪತ್ರಕರ್ತರಗಾಲು ವಿದ್ಯಾರ್ಥಿಗಳು ಮುಂದಡಿ ಇಡಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ವಿಶ್ವವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಜೆ. ಲೋಹಿತ್, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಿ. ಜಡಿಯಪ್ಪ, ಪತ್ರಿಕೋದ್ಯಮ ವಿಭಾಗದ ಅಧ್ಯಾಪಕ ಡಾ. ಗೋಪಾಲ, ಡಾ. ಶ್ವೇತಾ ಎಂ. ಹನ್ಸ್, ಕೇಶವಮೂರ್ತಿ, ಡಾ. ಎನ್. ನವೀನ್, ತತ್ವಶಾಸ್ತ್ರ ವಿಭಾಗದ ಅಧ್ಯಾಪಕ ಡಾ. ಕೆ.ಎನ್. ಬಸವರಾಜು, ವಿದ್ಯಾರ್ಥಿಗಳಾದ ಯೋಗಶ್ರೀ, ಚಂದ್ರಲಾ, ಮಹದೇವ, ಪ್ರಸಾದ್, ನಂದೀಶ, ಎಂ.ಕೆ. ಕೀರ್ತನಾ ಮತ್ತು ಪಿ. ದೀಕ್ಷಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...