ಸೆ. 5 | ಗೌರಿ ಲಂಕೇಶ್‌ಗೆ 7ನೇ ವರ್ಷದ ನುಡಿನಮನ: ಬೆಂಗಳೂರಿನಲ್ಲಿ ‘ಗೌರಿ ನೆನಪು’ ಕಾರ್ಯಕ್ರಮ

Date:

ಸಾಮಾಜಿಕ ಹೋರಾಟಗಾರ್ತಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ನಾಳೆ(ಸೆ.5)ಗೆ ಏಳು ವರ್ಷವಾಗಲಿದೆ. ಸದಾ ಸತ್ಯದ ಪರವಾಗಿದ್ದ, ದಮನಿತರ ಹಕ್ಕುಗಳಿಗಾಗಿ ತಮ್ಮ ಪತ್ರಿಕೆಯನ್ನು ಮೀಸಲಿಟ್ಟಿದ್ದ ಅವರ ಸಾವು ದೇಶದ ಹಲವಾರು ಜನರಿಗೆ ಆಘಾತ ಮೂಡಿಸಿತ್ತು.

ಸೆಪ್ಟೆಂಬರ್ 5, 2017 ರಂದು ಬಲಪಂಥೀಯ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಅವರ ನೆನಪಿಗಾಗಿ ಗೌರಿ ಮೆಮೋರಿಯಲ್ ಟ್ರಸ್ಟ್‌ ನಾಳೆ ಬೆಂಗಳೂರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಗುರುವಾರ ಬೆಳಗ್ಗೆ 8ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ’ ನಡೆಯಲಿದೆ. ಈ ವೇಳೆ ಗೌರಿ ಲಂಕೇಶ್ ಕುಟುಂಬ ಸದಸ್ಯರು, ಹೋರಾಟಗಾರರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆ 5ಕ್ಕೆ ‘ಗೌರಿ ಲಂಕೇಶ್ ನೆನಪು’ ಕಾರ್ಯಕ್ರಮ

ಸಂಜೆ 5ಕ್ಕೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ ಮುಂಭಾಗ ಇರುವ ಚಲನಚಿತ್ರ ಕಲಾವಿದರ ಸಂಘದ ಡಾ.ಅಂಬರೀಷ್‌ ಸಭಾಂಗಣದಲ್ಲಿ ‘ಗೌರಿ ಲಂಕೇಶ್ ನೆನಪು 2024’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗೌರಿ ಲಂಕೇಶ್: ಕೋಮುವಾದಿ ಕತ್ತಲಿಗೆ ಸವಾಲೆಸೆದ ಬೆಳ್ಳಂಬೆಳಕಿನ ದೀವಟಿಗೆ

ಈ ಕಾರ್ಯಕ್ರಮದಲ್ಲಿ ‘ಸಮಕಾಲೀನ ಚಿಂತನೆ, ಗಂಡಾಂತರದಲ್ಲಿ ಗಣರಾಜ್ಯ’ ಎಂಬ ವಿಷಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ, ಹಿರಿಯ ಸಾಹಿತಿ ಪ್ರೊ. ರಹಮತ್ ತರೀಕೆರೆ, ಮುಂಬೈಯ ಟಾಟಾ ಸಾಮಾಜಿಕ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ಆರ್. ರಾಮಕುಮಾರ್, ಹಿರಿಯ ಸಾಮಾಜಿಕ ಹೋರಾಟಗಾರ್ತಿ ಪ್ರೊ. ಮೀನಾಕ್ಷಿ ಬಾಳಿ ಹಾಗೂ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಗೌರಿ 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...