ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

Date:

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ ದುಬಾರೆ ಹಾಡಿಯ ನಿವಾಸಿಗಳ ಸಮಸ್ಯೆಯನ್ನು ಗಮನ ಸೆಳೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್‌ಕ್ಲಬ್ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ‘ಪತ್ರಕರ್ತರ ನಡೆ ಹಾಡಿಯ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಪ್ರಕೃತಿದತ್ತ ಸೌಂದರ್ಯದೊಂದಿಗೆ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ. ಸಾಕಾನೆ ಶಿಬಿರವನ್ನು ಕಂಡು ಜನ ಬೆರಗಾಗುತ್ತಾರೆ. ಕಾವೇರಿ ನೀರಿಗೆ ಮನಸೋಲುತ್ತಾರೆ. ರ‍್ಯಾಫ್ಟಿಂಗ್‌ನೊಂದಿಗೆ ಜಲಕ್ರೀಡೆಯ ಅನುಭವವು ಹಿತ ನೀಡುತ್ತದೆ. ಆದರೆ, ನದಿ ದಾಟಿ, ಸಾಕಾನೆ ಶಿಬಿರ ಕಳೆದ ನಂತರ ಅದಲ್ಲಿಯೇ ತಲತಲಾಂತರಗಳಿಂದ ಬದುಕು ಕಟ್ಟಿಕೊಂಡಿರುವ ಬುಡಕಟ್ಟು ಜನರ ದಯನೀಯ ಸ್ಥಿತಿ ಯಾರಿಗೂ ಬೇಡವಾಗಿದೆ.

ಅಂಗನವಾಡಿಯಿದ್ದರು ಶಿಕ್ಷಕರಿಲ್ಲ, ದಾರಿಯಿದ್ದರು ಗುಣಮಟ್ಟದ ರಸ್ತೆಯಿಲ್ಲ, ಜಾಗವಿದ್ದರು ವಾಸಿಸಲು ಯೋಗ್ಯವಿಲ್ಲ, ಮನೆ ಇಲ್ಲದ ಜನರ ಗೋಳನ್ನು ಪತ್ರಕರ್ತರು ತಿಳಿದುಕೊಂಡರು. ಈ ನಿಟ್ಟಿನಲ್ಲಿ ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಸನ್ನ ಕುಮಾರ್, ಚೆಸ್ಕಾಂ ಕಾರ್ಯಪಾಲಕ ಅಭಿಯಂತರ ಎಸ್.ಎಸ್. ಸತೀಶ್ ಅವರುಗಳನ್ನು ಸ್ಥಳಕ್ಕೆ ಕರೆಸಿಕೊಂಡು ನಿವಾಸಿಗಳ ಸಮಸ್ಯೆಗಳನ್ನು ತಿಳಿಸುವ ಪ್ರಯತ್ನವನ್ನು ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಸ್ಯೆಗಳನ್ನು ತೆರೆದಿಟ್ಟ ಆದಿವಾಸಿಗಳು ತಾವು ಅನುಭವಿಸುತ್ತಿರುವ ಸಮಸ್ಯೆಗಳನ್ನು ಎಳೆಎಳೆಯಾಗಿ ಅಧಿಕಾರಿಗಳ ಎದುರು ತೆರೆದಿಟ್ಟರು. ಸಮರ್ಪಕವಾಗಿ ವಿದ್ಯುತ್ ಸಂಪರ್ಕವಿಲ್ಲ, ರಸ್ತೆ ಸಂಪೂರ್ಣ ಹದಗೆಟ್ಟಿದೆ. ಚಿಕಿತ್ಸೆಗೆ ಕರೆದೊಯ್ಯುವಾಗ ಮೃತಪಟ್ಟಿರುವ ಉದಾಹರಣೆಗಳು ಕೂಡ ಇವೆ. ಜೋಪಡಿಯಲ್ಲಿ ಶೋಚನೀಯವಾಗಿ ಹಲವು ನಿವಾಸಿಗಳು ಬದುಕುತ್ತಿದ್ದಾರೆ. ಕೆಲವು ಮನೆಗಳ ಮೇಲೆ ಮರ ಬಿದ್ದು ನಷ್ಟವೂ ಉಂಟಾಗಿದೆ ಎಂದು ನಿವಾಸಿಗಳು ಗೋಳು ಹೇಳಿಕೊಂಡರು.

ಸ್ಥಳೀಯ ನಿವಾಸಿ ನಾಗು ಮಾತನಾಡಿ, ಇಲ್ಲಿನ ನಿವಾಸಿಗಳಿಗೆ ಪಡಿತರ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನಮ್ಮ ಗೋಳು ಕೇಳುವವರು ಇಲ್ಲದಾಗಿದೆ. ಅಲ್ಲದೆ ಪಟ್ಟಣಕ್ಕೆ ತೆರಳಲು ಸುತ್ತಿ ಬಳಸಿ ತೆರಳಬೇಕಾದ ಹಿನ್ನೆಲೆ ದುಬಾರೆ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣವಾಗಬೇಕೆಂದು ಒತ್ತಾಯಿಸಿದರು.

ಹಾಡಿಯಲ್ಲಿರುವ ಅಂಗನವಾಡಿಯಲ್ಲಿ ಹಲವು ಸಮಯದಿಂದ ಶಿಕ್ಷಕರಿಲ್ಲದ ಪರಿಣಾಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ತಕ್ಷಣ ಶಿಕ್ಷಕರನ್ನು ನೇಮಿಸಬೇಕೆಂದು ಸ್ಥಳೀಯರು ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದರು. ಸ್ಥಳೀಯ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಎಲಿಜಬೆತ್ ಮಾತನಾಡಿ, ಅಂಗನವಾಡಿ ಮಕ್ಕಳಿಗೆ ಶಾಲೆಯಲ್ಲಿ ತರಗತಿ ನಡೆಸಲಾಗುತ್ತಿದೆ. ಶಿಕ್ಷಕರಿಲ್ಲದ ಪರಿಣಾಮ ಶಾಲಾ ಅಕ್ಷರ ದಾಸೋಹ ಸಿಬ್ಬಂದಿಯನ್ನು ಮಕ್ಕಳನ್ನು ನೋಡಿಕೊಳ್ಳಲು ನಿಯೋಜಿಸಲಾಗಿದೆ. ಶಿಕ್ಷಕರ ನೇಮಕಕ್ಕೆ ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ. ಪ್ರಸಕ್ತ ಸಾಲಿನಲ್ಲಿ 17 ವಿದ್ಯಾರ್ಥಿಗಳು ದಾಖಲಾಗಿದ್ದು, 1 ರಿಂದ 5ನೇ ತರಗತಿಯ ತನಕ ಪಾಠ ಪ್ರವಚನ ನಡೆಯುತ್ತಿದೆ.

ಶಾಲೆಗೆ ಸೂಕ್ತ ಭದ್ರತೆ ಇಲ್ಲದ ಕಾರಣ ಕಾಡುದನಗಳು ಆವರಣಕ್ಕೆ ಬರುತ್ತವೆ. ಸಗಣಿ ತೆಗೆಯುವ ಕೆಲಸವನ್ನು ಮಕ್ಕಳು ಹಾಗೂ ನಾವು ಮಾಡಬೇಕಾಗಿದೆ. ಸದ್ಯಕ್ಕೆ ತಂತಿ ಬೇಲಿ ಇದೆ. ಅದನ್ನು ಹಾರಿ ದನಗಳು ಬರುತ್ತಿವೆ. ಗ್ರಾ.ಪಂ. ಗಮನಕ್ಕೆ ತಂದರು ಅನುದಾನ ನೀಡುತ್ತಿಲ್ಲ. ಶಾಲೆಗೆ ದಾನಿಗಳು ಕಂಪ್ಯೂಟರ್ ನೀಡಿದ್ದಾರೆ. ಸೂಕ್ತ ವಿದ್ಯುತ್ ವ್ಯವಸ್ಥೆ ಇಲ್ಲದೆ ಇದನ್ನು ಉಪಯೋಗಿಸಲಾಗುತ್ತಿಲ್ಲ. ಇಲ್ಲಿನ ಮಕ್ಕಳಿಗೆ ಕಲಿಕೆಯ ಆಸಕ್ತಿಯಿದೆ. ಇಲ್ಲಿಯೇ ವಿದ್ಯಾವಂತರು ಇರುವ ಕಾರಣ ಅಂಗನವಾಡಿಗೆ ಶಿಕ್ಷಕರನ್ನು ಆದ್ಯತೆ ಮೇರೆಗೆ ಇಲ್ಲಿಂದಲೇ ನೇಮಿಸಬೇಕೆಂದರು.

ಹಾಡಿಯಲ್ಲಿರುವ ಬಹುತೇಕ ಮನೆಗಳು ದುಸ್ಥಿತಿಯಲ್ಲಿವೆ. ಕುಟುಂಬ ದೊಡ್ಡದಾಗುತ್ತ ಹೋದಂತೆ ಸಣ್ಣ ಜೋಪಡಿಯಲ್ಲಿ ಬದುಕು ನಡೆಸಬೇಕಾದ ಅನಿವಾರ್ಯತೆ ತಲೆದೂರಿದೆ. ಸರ್ಕಾರದ ಸೌಲಭ್ಯ ದೊರೆಯುತ್ತಿಲ್ಲ. ಹಲವು ಮನೆಗಳ ಗೋಡೆ ಬೀಳುವ ಭಯವಿದೆ. ಗೋಡೆ ಬಿದ್ದು ಒಬ್ಬ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಪಡಿತರ ತರಲು, ಅಗತ್ಯ ಸಾಮಗ್ರಿ ತರಲು ಮಾಲ್ದಾರೆಗೆ ಹೋಗಬೇಕಾಗಿದ್ದು, ದುಬಾರೆ ಹಾಡಿಯಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಬೇಕು. ರಸ್ತೆ ಸರಿಯಾಗಬೇಕು ಎಂದು ಒತ್ತಾಯಿಸಿದರು.

ಆದಿವಾಸಿ ಮುಖಂಡ, ಜಿ.ಪಂ. ಮಾಜಿ ಸದಸ್ಯ ಚಂದ್ರು ಮಾತನಾಡಿ, ಜೇನು ಕುರುಬ ಸಮುದಾಯವನ್ನು ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಯೋಗ್ಯ ಮನೆ ಇಲ್ಲ, ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಎಲ್ಲರಿಗೂ ಮೂಲಭೂತ ಸೌಲಭ್ಯ ಸಿಗಬೇಕು. ನಮ್ಮ ಹಕ್ಕು ಪಡೆಯಲು ಭಿಕ್ಷೆ ಬೇಡುವಂತಾಗಿದೆ. ಶಾಲೆಗು ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಅಧಿಕಾರಿಗಳಿಗೆ ದುಬಾರೆ ಹಾಡಿಯಿದೆ ಎಂಬುದೆ ತಿಳಿದಿಲ್ಲ. ಜನಪ್ರತಿನಿಧಿಗಳಂತು ತಿರುಗಿ ನೋಡುತ್ತಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಮತ ಕೇಳಲು ಬರುತ್ತಾರೆ. ನಂತರ ನಮ್ಮನ್ನು ಮರೆಯುತ್ತಾರೆ. ಹಾಡಿಗೆ ಸೂಕ್ತ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಬೇಕು. ದುಬಾರೆಯಲ್ಲಿ ಮುಂದೆ ಗ್ರಾಮ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ಐಟಿಡಿಪಿ ಅಧಿಕಾರಿ ಹೊನ್ನೇಗೌಡ ಮಾತನಾಡಿ, ದುಬಾರೆ ಹಾಡಿಗೆ ಸೂಕ್ತ ಸೌಲಭ್ಯ ಒದಗಿಸಲು ಇಲಾಖೆ ಕಟಿಬದ್ಧವಾಗಿದೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕವನ್ನು ಈಗಾಗಲೇ ಒದಗಿಸಲಾಗಿದೆ. ರಸ್ತೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 42 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಸರ್ವೆ ನಂತರ ಸಮುದಾಯ ಹಕ್ಕು ನೀಡುತ್ತೇವೆ. ಆದಿವಾಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ನಂಜರಾಯಪಟ್ಟಣದಲ್ಲಿ ವಸತಿ ಶಾಲೆ ವ್ಯವಸ್ಥೆ ಕಲ್ಪಿಸಿದ್ದೇವೆ. ಇದನ್ನು ಬಳಸಿಕೊಂಡು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ಅಂಗನವಾಡಿಗೆ ಶಿಕ್ಷಕರನ್ನು ತಕ್ಷಣ ನೇಮಿಸಲಾಗುವುದು. ವಾರದ 6 ದಿನವೂ ಕಾರ್ಯನಿರ್ವಹಿಸಲು ಕ್ರಮವಹಿಸಲಾಗುವುದು. ಸ್ಥಳೀಯ ವಿದ್ಯಾವಂತರಿಗೆ ಶಿಕ್ಷಕರನ್ನಾಗಿ ನೇಮಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಚೆಸ್ಕಾಂ ಅಧಿಕಾರಿ ಸತೀಶ್ ಮಾತನಾಡಿ, ಈಗಾಗಲೇ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ. 6 ರಿಂದ 7 ಮನೆಯವರು ಅಗತ್ಯ ದಾಖಲಾತಿ ನೀಡಿಲ್ಲದ ಕಾರಣದಿಂದ ಆರ್‌ಆರ್ ನಂಬರ್ ನೀಡಿಲ್ಲ. ದಾಖಲಾತಿ ನೀಡಿದ ತಕ್ಷಣ ಸಂಪರ್ಕ ನೀಡಲಾಗುವುದು ಎಂದು ಹೇಳಿದರು.

ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಮಾತನಾಡಿ, ಆದಿವಾಸಿಗಳಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸವಲತ್ತುಗಳು ಸಕಾಲದಲ್ಲಿ ದೊರೆಯಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ಮೂಲಭೂತ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಿ ಸ್ವಾವಲಂಬಿಯಾಗಿ ಬದುಕುವಂತೆ ಮಾಡಬೇಕು. ಸಮಾಜದ ಮುಖ್ಯವಾಹಿನಿಗೆ ಕರೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಪಾದಯಾತ್ರೆಗೂ ಸ್ಪಂದಿಸದ ಜಿಲ್ಲಾಡಳಿತ: ಆದಿವಾಸಿಗಳ ಹಕ್ಕುಗಳನ್ನು ಕೊಲ್ಲುತ್ತಿದೆಯೇ?

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಖಜಾಂಚಿ ಸುನಿಲ್ ಪೊನ್ನೇಟಿ ಸೇರಿದಂತೆ ನಿರ್ದೇಶಕರು, ಸದಸ್ಯರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...