‘ಅನ್ನಭಾಗ್ಯ’ಕ್ಕೆ 10 ವರ್ಷ | ಯಾರ ಕಣ್ಣಿಗೂ ಬೀಳದ ಹಮಾಲಿ ಕಾರ್ಮಿಕರು, ಜು.10ಕ್ಕೆ ಬೆಂಗಳೂರಲ್ಲಿ ಸಮಾವೇಶ

Date:

  • ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವ ಕ್ರಮ ಹಿಂಪಡೆಯಲು ಆಗ್ರಹ
  • ಜು. 10 : ಹಮಾಲಿ ಕಾರ್ಮಿಕರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ

‘ಅನ್ನಭಾಗ್ಯ’ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದು ಜುಲೈ 10ಕ್ಕೆ ಹತ್ತು ವರ್ಷ ತುಂಬುತ್ತಿದೆ. ಯಶಸ್ಸಿಗೆ ಕಾರಣರಾದ ಹಮಾಲಿ ಕಾರ್ಮಿಕರು ಯಾರ ಕಣ್ಣಿಗೂ ಬೀಳಲಿಲ್ಲ ಏಕೆ ಎಂದು ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆ ಪ್ರಶ್ನಿಸಿದೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ವರದರಾಜೇಂದ್ರ, “ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2013ರಲ್ಲಿ ಅಧಿಕಾರದಲ್ಲಿದ್ದಾಗ ಪಡಿತರ ವಿತರಣೆಯ ವ್ಯವಸ್ಥೆಗೆ ಅನ್ನಭಾಗ್ಯ ಯೋಜನೆಯೆಂದು ಹೆಸರಿಟ್ಟು, ಫ್ರೀಡಂ ಪಾರ್ಕಿನಲ್ಲಿ ಚಾಲನೆ ನೀಡಿದ್ದರು. ಆ ಮೂಲಕ ಸಮಗ್ರ ನೀತಿ ಜಾರಿ ಮಾಡಿ, ಬಡವರ ಬದುಕಿಗೆ ಬಹುದೊಡ್ಡ ಆಸರೆ ಕಲ್ಪಿಸಿದ್ದರಯ. ಈ ಮಧ್ಯೆ ಅನ್ನಭಾಗ್ಯ ಯೋಜನೆ ಸಾಕಷ್ಟು ವಿವಾದದ ವಿಚಾರವೂ ಆಗಿದೆ. ಈ ಯೋಜನೆಯ ಯಶಸ್ಸಿಗೆ ಲೋಡಿಂಗ್ ಕಾರ್ಮಿಕರು ಎಲೆಮರೆಯ ಕಾಯಿಯಂತೆ ಹಗಲಿರುಳು ದುಡಿದಿದ್ದಾರೆ. ಆದರೆ ಇದು ಯಾರ ಕಣ್ಣಿಗೂ ಬೀಳದೇ ಹೋಗಿರುವ ವಿಚಾರ ಇದು” ಎಂದು ಬೇಸರಿಸಿದರು.

‘ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಅದೇಶವನ್ನು ಈ ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿರುವ ಅವರು, “ಅನ್ನಭಾಗ್ಯ ಯೋಜನೆ ಜಾರಿ ಅಡಿ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಯಾವುದೇ ಸರ್ಕಾರದ ಅಧಿಕಾರಿಗಳು, ಗುತ್ತಿಗೆದಾರರು ಕಿರುಕುಳ ನೀಡಿ ಕೆಲಸದಿಂದ ಕಿತ್ತುಹಾಕುವುದನ್ನು ತಪ್ಪಿಸಲು ಕೆಲಸದ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರ ಮಾದರಿಯಲ್ಲಿ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಬೇಕು. ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ನಿಯಮಾನುಗುಣವಾಗಿ ಪ್ರತಿವರ್ಷ ಕೂಲಿದರ ಹೆಚ್ಚಿಸಲು ಸಮಗ್ರ ನಿಯಮ ರೂಪಿಸಬೇಕು” ಎಂದು ಇದೇ ವೇಳೆ ವರದರಾಜೇಂದ್ರ ತಿಳಿಸಿದರು.

“ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯನ್ನು ಜಾರಿಗೆ ತರಬೇಕು. ಎಲ್ಲ ಗುತ್ತಿಗೆ, ಅಸಂಘಟಿತ ಹಾಗೂ ಅಭದ್ರಿತ ಕಾರ್ಮಿಕರಿಗೂ ಕನಿಷ್ಟ 30 ಸಾವಿರ ವೇತನ ಹಾಗೂ ಉದ್ಯೋಗ ಭದ್ರತೆಯನ್ನು ಖಾತ್ರಿಗೊಳಿಸಿ ನೀತಿ ರೂಪಿಸಬೇಕು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ನಗದು ಹಣ ನೀಡುವುದನ್ನು ನಿಲ್ಲಿಸಿ ಆಹಾರ ಧಾನ್ಯಗಳನ್ನೇ ನೀಡಬೇಕು. ಅನ್ನಭಾಗ್ಯ ಹಮಾಲಿ ಕಾರ್ಮಿಕರಿಗೆ ಆಹಾರ ನಿಗಮದ ಮೂಲಕ ಸರ್ಕಾರವೇ ನೇರ ಸಂಬಳ ಪಾವತಿ ಮಾಡಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? 14ನೇ ಆಯವ್ಯಯ ಮಂಡಿಸುವ ಮೂಲಕ ಚರಿತ್ರಾರ್ಹ ದಾಖಲೆ ನಿರ್ಮಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ

ನಿರ್ದಿಷ್ಟ ಪ್ರಮಾಣದ ಕೂಲಿ ಕೆಲಸದ ಭದ್ರತೆ ಕಾರ್ಮಿಕರಿಗೆ ಇಲ್ಲವಾಗಿದೆ. ಈ ಕಾರ್ಮಿಕರ ಬವಣೆಯನ್ನು ಯಾರೂ ಕೇಳಿಸಿಕೊಂಡಿಲ್ಲ. ನಮ್ಮ ದನಿಯನ್ನು ಕೇಳಿಸಲಿಕ್ಕಾಗಿಯೇ ಈ ಜುಲೈ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಲೋಡಿಂಗ್‌ ಮತ್ತು ಅನ್ಲೋಡಿಂಗ್‌ ಕಾರ್ಮಿಕರ ದಶಮಾನೋತ್ಸವ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಅಂದು ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರಕ್ಕೆ, ಮಂದಿಸಲಾಗುತ್ತಿದೆ. ರಾಜ್ಯದ ನಾನಾ ಮೂಲೆಗಳಿಂದ ಕಾರ್ಮಿಕ ಬಂಧುಗಳು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಎಲ್ಲ ಹಕ್ಕೊತ್ತಾಯಗಳನ್ನು ಸರ್ಕಾರಕ್ಕೆ ಮಂಡಿಸಲು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರು, ಅನ್ನಭಾಗ್ಯ ಹಮಾಲಿ ಕಾರ್ಮಿಕರು, ಮೆಟ್ರೋ ಕಾರ್ಮಿಕರು, ವಾಣಿಜ್ಯ ತೆರಿಗೆ ಕಾರ್ಮಿಕರು, ಬಿಬಿಎಂಪಿ ಪೌರ ಕಾರ್ಮಿಕರು, ರೇಸ್ ಕೋರ್ಸ್‌ ಕಾರ್ಮಿಕರು, ಆರೋಗ್ಯ ಸಾರಿಗೆ ಮುಂತಾದ ಇಲಾಖೆಗಳ ಕಾರ್ಮಿಕರೂ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ವರದರಾಜೇಂದ್ರ ತಿಳಿಸಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ, ಕಾರ್ಮಿಕ ಸಚಿವ ಸಂತೋಷ್ ಲಾಡ್‌, ಹಿರಿಯ ಕಾರ್ಮಿಕ ಮುಖಂಡ, ಹಿರಿಯ ಹೈಕೋರ್ಟ್ ವಕೀಲ ಎಸ್.ಬಾಲನ್, ಪ್ರೊ. ಬಾಬು ಮಾಥ್ಯೂ, ಡಾ.ಹೆಚ್ ವಿ ವಾಸು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಆದಿನಾರಾಯಣ್, ರವಿ ಮೋಹನ್, ಬಿಬಿಎಂಪಿ ಪೌರ ಕಾರ್ಮಿಕ ಸಂಘದ ಚನ್ನಮ್ಮ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...