ಜು.7 | ಉಡುಪಿ ಕ್ರೈಸ್ತ ಸಮುದಾಯದ ವತಿಯಿಂದ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ

Date:

ಕರ್ನಾಟಕ ಸರ್ಕಾರದ ವಿಧಾನ ಪರಿಷತ್‌ಗೆ ನೂತನವಾಗಿ ಚುನಾಯಿತರಾದ ಐವನ್ ಡಿಸೋಜಾ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಜುಲೈ 7 ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಗುರು ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು.

ಶುಕ್ರವಾರ ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜುಲೈ 7 ರಂದು ಸಂಜೆ 4 ಗಂಟೆಗೆ ಮಿಷನ್ ಕಾಂಪೌಂಡ್‌ನಲ್ಲಿರುವ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ತಿಳಿಸಿದರು.

ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೋ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವಾರದ ವಿನಯಕುಮಾರ್ ಸೊರಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಫಾದರ್ ಐವನ್ ಸೋನ್ಸ್,  ಫಾದರ್ ಎಂ.ಸಿ. ಮಥಾಯಿ, ಪಾಸ್ಟರ್ ಸೆಲ್ವ ಕುಮಾರ್, ರೆ.ವಿಜಯ್ ಹಾರ್ವಿನ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸನ್ಮಾನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್, ಉಡುಪಿ, ಸಿಎಸ್ಐ, ಯುಬಿಎಂಸಿ, ಆರ್ಥೊಡಾಕ್ಸ್ ಸಿರಿಯನ್ ಚರ್ಚ್‌ಗಳು, ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ, ಉಡುಪಿ ಧರ್ಮಪ್ರಾಂತ್ಯದ ಕ್ಯಾಥೋಲಿಕ್ ಸ್ತ್ರೀ ಸಂಘಟನೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಾಲನ, ಹಾಗೂ ಉಡುಪಿ ಜಿಲ್ಲೆಯ ಸಮಾನ ಮನಸ್ಕ ಜನರು ಜಂಟಿಯಾಗಿ ಆಯೋಜಿಸಿರುತ್ತಾರೆ. ಅವರು ಎರಡನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವುದಕ್ಕೆ ಉಡುಪಿ ಜಿಲ್ಲೆಯ ಜನತೆ ಹಾಗೂ ಕ್ರೈಸ್ತ ಸಮುದಾಯ ವಿಶೇಷ ರೀತಿಯಲ್ಲಿ ಹರ್ಷ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಸಮುದಾಯವು ಐವನ್ ಡಿಸೋಜಾ ಅವರಿಗೆ ಅಭಿನಂದನೆ ಸಲ್ಲಿಸಲು ಮತ್ತು ಅವರಿಗೆ ಎಲ್ಲಾ ಯಶಸ್ಸನ್ನು ಬಯಸಲು ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.

ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್‌ನ ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಮಾತನಾಡಿ, “ಪಂಚಾಯತಿ ಮತ್ತು ತಾಲ್ಲೂಕು-ಜಿಲ್ಲಾ ಪಂಚಾಯತ್‌ಗಳ ತಳಮಟ್ಟದಿಂದ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವ ಐವನ್ ಡಿಸೋಜ ಅವರು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷದ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ಅವರು ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದಾರೆ. ಅವರು 2014 ರಿಂದ 2020 ರವರೆಗೆ ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ” ಎಂದರು.

“ಈಗ ಅವರು ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಇದಕ್ಕಾಗಿ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಐವನ್ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾರೆ. ಹಲವಾರು ನಿರ್ಗತಿಕ-ಅಸ್ವಸ್ಥ ವ್ಯಕ್ತಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣವನ್ನು ನೀಡುವಲ್ಲಿ ನೆರವು ನೀಡಿದ್ದಾರೆ’ ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಉದ್ಯಮಿಯ ಮನೆ ದರೋಡೆ ಪ್ರಕರಣ: 10 ಮಂದಿಯ ಬಂಧನ; ಲಾರಿ ಚಾಲಕನೇ ಸೂತ್ರಧಾರ!

ಸುದ್ದಿಗೋಷ್ಠಿಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ, ಕ್ಯಾಥೋಲಿಕ್ ಸಭಾ ಉಡುಪಿ ಅಧ್ಯಕ್ಷ ಸಂತೋಷ್ ಕರ್ನೆಲಿಯೊ, ಕ್ರೈಸ್ತ ಮುಂದಾಳು ವೆರೋನಿಕಾ ಕರ್ನೆಲಿಯೋ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...