ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಡಿಸಿಗೆ ಸಿಬ್ಬಂದಿಯಿಂದಲೇ  ಚಾಕು ಇರಿಯಲು ಯತ್ನ: ಜೀವಾಪಾಯದಿಂದ ಪಾರು

Date:

ಸಾರಿಗೆ ಸಿಬ್ಬಂದಿಯೇ ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕು ಇರಿಯಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.

ಘಟನೆಯಿಂದ ಗಾಯಗೊಂಡಿರುವ ಕೆಎಸ್‌ಆರ್‌ಟಿಸಿ ಡಿಸಿಯಾಗಿರುವ ಜಗದೀಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಕುವಿನಿಂದ ದಾಳಿ ಮಾಡಿರುವ ಸಾರಿಗೆ ಸಿಬ್ಬಂದಿಯನ್ನು ಜೂನಿಯರ್ ಅಸಿಸ್ಟೆಂಟ್ ರಿತೇಶ್ ಎಂದು ಗುರುತಿಸಲಾಗಿದೆ. ಗಾಯಗೊಳಿಸಿದ ನಂತರ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001650180
ಆರೋಪಿ ಸಿಬ್ಬಂದಿ ರಿತೇಶ್ ಹಾಗೂ ಗಾಯಗೊಂಡ ಅಧಿಕಾರಿಯ ಕೈಬೆರಳು

ರಿತೇಶ್ ಹಾಜರಾತಿ ಸರಿಯಿಲ್ಲ ಎಂದು ಕುಟುಂಬವನ್ನ ಕರೆಸಿ ಜಗದೀಶ್ ಕುಮಾರ್ ಅವರು ಕೌನ್ಸೆಲಿಂಗ್ ಮಾಡಿದ್ದರು. ಕುಟುಂಬದವರ ಮನವಿಯ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ರಿತೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದರಿಂದ ಕುಪಿತಗೊಂಡಿದ್ದ ರಿತೇಶ್, ಇಂದು ಸಂಜೆ 7.30ರ ವೇಳೆಗೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಚಾಕುವಿನಿಂದ ದಾಳಿ ಮಾಡುತ್ತಿದ್ದಾಗ ಕೈ ಅಡ್ಡ ಕೊಟ್ಟಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ‌. ಘಟನೆಯಿಂದಾಗಿ ಕೆ.ಎಸ್.ಆರ್.ಟಿ.ಸಿ. ಡಿಸಿ ಜಗದೀಶ್ ಕುಮಾರ್ ಅವರ ಎಡಗೈನ ಎರಡು ಬೆರಳುಗಳಿಗೆ ಗಾಯವಾಗಿದೆ.

ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆಯೇ ಈ ಘಟನೆ ನಡೆದಿರುವುದು ಅಧಿಕಾರಿಗಳಿಗೆ ಆಘಾತ ಉಂಟು ಮಾಡಿದೆ. ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಸಿಬ್ಬಂದಿ ರಿತೇಶ್ ನಾಪತ್ತೆಯಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...