ತುಮಕೂರು | ಮಗಳ ಸಾವಿಗೆ ನ್ಯಾಯ ಕೊಡಿಸಿ; ಜಿಲ್ಲಾಧಿಕಾರಿ ಕಚೇರಿ ಎದುರು ಪೋಷಕರ ಪ್ರತಿಭಟನೆ

Date:

ಮಗಳನ್ನು ಕೊಲೆ ಮಾಡಿರುವ ಅಳಿಯನನ್ನು ಬಂಧಿಸುವಂತೆ ಆಗ್ರಹಿಸಿ ಗುಬ್ಬಿಯ ಹರಿಶೇಷ ದಂಪತಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕೊಲೆಯಾದ ಸ್ಥಳಕ್ಕೆ ಪೋಷಕರನ್ನು ಕರೆಸಿಕೊಂಡು ವಿಚಾರಣೆ ಮಾಡದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಮೃತದೇಹದ ಮೇಲೆ ಗಾಯಗಳನ್ನು ಗಮನಿಸಿದಾಗ, ಹೊಡೆದು ಸಾಯಿಸಿರುವುದು ತಿಳಿಯುತ್ತದೆ. ಹಣದ ಆಮಿಷಕ್ಕೆ ಒಳಗಾಗಿ ಸರಿಯಾದ ರೀತಿಯಲ್ಲಿ ಮರಣೋತ್ತರ ಪರೀಕ್ಷೆಯನ್ನು ಮಾಡಿಲ್ಲ. ಜಿಲ್ಲಾಧಿಕಾರಿಗಳು ಈ ಕುರಿತು ಗಮನ ಹರಿಸಿ, ಸೂಕ್ತ ಕ್ರಮಕೈಗೊಳ್ಳಬೇಕು. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮೃತಳ ತಂದೆ-ತಾಯಿ ಒತ್ತಾಯಿಸುತ್ತಿದ್ದಾರೆ.

ನಮ್ಮ ಮಗಳು ಯಶೋದಮ್ಮನನ್ನು, ತಾಲ್ಲೂಕಿನ ಊರ್ಡಿಗೆರೆ ಟಿ.ಎನ್.ಅಭಿಲಾಷ್‌ಗೆ,  2020ರ ಮೇ 30ರಂದು ಮದುವೆ ಮಾಡಿಕೊಡಲಾಗಿತ್ತು. ಪ್ರಾರಂಭದಲ್ಲಿ ಒಳ್ಳೆಯವರಂತೆ ನಡೆದುಕೊಂಡ ಅಭಿಲಾಷ್, ಕಳೆದ ಒಂದು ವರ್ಷದಿಂದ ಮಗಳಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಸೆ. 6ರಂದು ಮಗಳನ್ನು ಕೊಲೆ ಮಾಡಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡದ್ದಾಳೆ ಎಂದು ಬಿಂಬಿಸಿದ್ದಾರೆ. ಇವರಿಗೆ ಪೊಲೀಸರು ಸಹ ಬೆಂಬಲ ನೀಡಿದ್ದಾರೆ, ಎಂದು ಹರಿಶೇಷ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...