ಕೆ ಆರ್‌ ಪೇಟೆ | ಜಯಕುಮಾರನ ಸಜೀವ ದಹನ; ಪೊಲೀಸರ ಕರ್ತವ್ಯಲೋಪದ ವಿರುದ್ಧ ಪ್ರತಿಭಟನೆ

Date:

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕತ್ರಘಟ್ಟ ಗ್ರಾಮದ ಪರಿಶಿಷ್ಟ ಜನಾಂಗದ ಜಯಕುಮಾರನ ಸಜೀವ ದಹನ ಹಾಗೂ ಪೊಲೀಸರ ಕರ್ತವ್ಯಲೋಪ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಶನಿವಾರ ಬೆಳಿಗ್ಗೆ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆ ಬಳಿಕ ಪ್ರತಿಭಟನಾಕಾರರು, ತಪ್ಪಿತಸ್ಥನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮದ್ದೂರು ತಾಲೂಕಿನ ತಹಶೀಲ್ದಾರ್ ಮೂಲಕ ಗೃಹಮಂತ್ರಿ ಜಿ ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿ, “ದಲಿತ ಜಯಕುಮಾರನನ್ನು ಅದೇ ಗ್ರಾಮದ ರೌಡಿಶೀಟರ್ ಅನಿಲ್‌ಕುಮಾರನು ಸಜೀವ ದಹನ ಮಾಡಿ ಅಮಾನುಷವಾಗಿ ಕೊಲೆಗೈದಿರುವುದು ಖಂಡನೀಯ. ಮೃತ ಜಯಕುಮಾರನು ಮೇ 15ರಂದು, ʼಅನಿಲ್‌ ಕುಮಾರನಿಂದ ನನಗೆ ಪ್ರಾಣ ಭಯವಿದೆ, ನನಗೆ ರಕ್ಷಣೆ ನೀಡಿʼ ಎಂದು ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮವಹಿಸದ ಕಾರಣ ಅಮಾಯಕ ಜಯಕುಮಾರನ ಕೊಲೆಗೆ ಪೊಲೀಸರೂ ಕೂಡ ನೇರ ಹೊಣೆಗಾರರಾಗಿದ್ದಾರೆ” ಎಂದು ಆರೋಪಿಸಿದರು.

“ಮೇ 17 ಘಟನೆ ನಡೆದಿದ್ದು, ಕೊಲೆ ಮಾಡಿರುವುದು ಕಂಡ ಬಂದರೂ, ಡಿವೈಎಸ್‌ಪಿ ಚಲುವರಾಜು, ಪಿಐ ಆನಂದೇಗೌಡ, ಪಿಎಸ್‌ಐ ಸುಬ್ಬಯ್ಯ, ಮುಖ್ಯಪೇದೆ ವೈರಮುಡಿಗೌಡ ಇವರುಗಳು ಕೊಲೆಗಾರರನ್ನು ರಕ್ಷಿಸಲು ಸದರಿ ಪ್ರಕರಣವನ್ನು ಕೊಲೆ ಪ್ರಕರಣವೆಂದು ದಾಖಲಿಸುವ ಬದಲು ಆತ್ಮಹತ್ಯೆ ಪ್ರಕರಣವೆಂದು ದಾಖಲು ಮಾಡಿ, ಕರ್ತವ್ಯಲೋಪವೆಸಗಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿಗಳು ದಲಿತ ವಿರೋಧಿ ನೀತಿಗಳನ್ನು ಸಾಬೀತುಪಡಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೆ ಆರ್‌ ಪೇಟೆ ಪ್ರತಿಭಟನೆ 1

“ಜಯಕುಮಾರನ ಹೆಂಡತಿ ಓದು-ಬರಹ ತಿಳಿಯದವರಾಗಿದ್ದು, ಸಾಕ್ಷರತೆಯಿಂದ ಸಹಿ ಮಾತ್ರ ಕಲಿತಿದ್ದಾರೆ. ಇದನ್ನು ಅರಿತ ಪೊಲೀಸರು ಆ ಹೆಣ್ಣುಮಗಳಿಗೆ ಒತ್ತಡ ಹಾಕಿ ಸಹಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 20 ರಂದು ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿರುವ ವಿಷಯ ಗೊತ್ತಾಗಿ ನಾಗಮಂಗಲ ಡಿವೈಎಸ್‌ಪಿ ಅವರಿಗೆ ಕೊಲೆ ಪ್ರಕರಣ ದಾಖಲಿಸಲು ದೂರು ಸಲ್ಲಿಸಲಾಗಿದ್ದರೂ ಕೂಡ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಗೋಡೆ ಬರಹ ಕ್ಯಾಂಪೇನ್‌ಗೆ ಪೊಲೀಸರ ವಿರೋಧ

“ಕೊಲೆಯಾದ ಜಯಕುಮಾರನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹50 ಲಕ್ಷ ಪರಿಹಾರ ನೀಡಬೇಕು. ಮೃತನ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು. ಕೊಲೆಮಾಡಿರುವ ರೌಡಿಶೀಟರ್ ಆನಿಲ್‌ಕುಮಾರ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಆತನಿಗೆ ಕಠಿಣ ಗಲ್ಲುಶಿಕ್ಷೆ ನೀಡಬೇಕು. ಕೊಲೆ ಮಾಡಿ ರೌಡಿಶೀಟರ್ ಅನಿಲ್‌ ಕುಮಾರ್‌ನನ್ನ ರಕ್ಷಿಸಲು ಆತ್ಮಹತ್ಯೆ ಪ್ರಕರಣ ದಾಖಲಿಸಿ ಕರ್ತವ್ಯಲೋಪ ಎಸಗಿರುವ ಡಿವೈಎಸ್‌ಪಿ ಚಲುವರಾಜು, ಪಿ.ಐ.ಆನಂದೇಗೌಡ, ಪಿ.ಎಸ್.ಐ ಸುಬ್ಬಯ್ಯ, ಮುಖ್ಯ ಪೇದೆ ವೈರಮುಡಿಗೌಡ ಇವರುಗಳನ್ನು ಕೂಡಲೇ ಅಮಾನತುಗೊಳಿಸಬೇಕು. ಆತ್ಮಹತ್ಯೆಯ ಪ್ರಕರಣವನ್ನು ಕೈಬಿಟ್ಟು ಕೊಲೆ ಪ್ರಕರಣ ದಾಖಲಿಸಿ ಜಯಕುಮಾರನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...