ಕೌಟುಂಬಿಕ ಕಲಹದ ಹಿನ್ನೆಲೆ ನವದಂಪತಿಗಳಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಜಯನಗರ ಬಡಾವಣೆಯ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದ ಪಕ್ಕದಲ್ಲಿರುವ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಬೂಕನಕೆರೆ ಹೋಬಳಿಯ ಹೊಸಕೋಟೆ ಗ್ರಾಮದ ಗಣೇಶಗೌಡ–ಮಂಜುಳಾ ದಂಪತಿಗಳ ಪುತ್ರ ದರ್ಶನ್ (29) ಹಾಗೂ ನಾಟನಹಳ್ಳಿ ಗ್ರಾಮದ ಲಕ್ಷ್ಮಣಗೌಡ–ಸುನಂದ ದಂಪತಿಗಳ ಪುತ್ರಿ ಎನ್.ಎಲ್. ದಿವ್ಯ (25) ಮೃತ ದುರ್ದೈವಿಗಳು.
ಮೂರು ವರ್ಷಗಳ ಹಿಂದೆ ದರ್ಶನ್ ಮತ್ತು ದಿವ್ಯ ಅವರ ವಿವಾಹವಾಗಿತ್ತು. ದಂಪತಿಗಳಿಗೆ ಎರಡು ವರ್ಷದ ಹೆಣ್ಣು ಮಗುವಿದ್ದು, ಅದೃಷ್ಟವಶಾತ್ ಮಗು ಬದುಕುಳಿದಿದೆ ಎಂದು ತಿಳಿದು ಬಂದಿದೆ. ದಂಪತಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ಕತಾರ್, ಬಹರೈನ್, ಸೌದಿ ಅರೇಬಿಯಾ, ಯುಎಇ ಮೇಲೆ ಇರಾನ್ ಸರಣಿ ದಾಳಿ
ಘಟನಾ ಸ್ಥಳಕ್ಕೆ ಕೃಷ್ಣರಾಜಪೇಟೆ ಟೌನ್ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.





