ಕಡಬ | ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಬೃಹತ್ ಮರ: ಸವಾರ ಸ್ಥಳದಲ್ಲೇ ಸಾವು

Date:

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ದೂಪದ ಮರ ಬಿದ್ದು ದ್ವಿಚಕ್ರ ಸವಾರ ಸ್ಧಳದಲ್ಲೇ ಮೃತಪಟ್ಟ ಘಟನೆ ನ. 2 ರಂದು ಶನಿವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ -ಪಂಜ ರಸ್ತೆಯ ಕೋಡಿಂಬಾಳ ಸಮೀಪ ಪುಳಿಕುಕ್ಕು ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಎಡಮಂಗಲ ಸಿ. ಎ. ಬ್ಯಾಂಕ್‌ನ ಪಿಗ್ಮಿ ಸಂಗ್ರಾಹಕ ಸೀತಾರಾಮ ಗೌಡ (58) ಎಂದು ಗುರುತಿಸಲಾಗಿದೆ.

ಮೃತ ಸೀತಾರಾಮ ಗೌಡ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮನೆಯಲ್ಲಿ ದೀಪಾವಳಿ ಪ್ರಯುಕ್ತ ಹರಕೆ ಇದ್ದುದರಿಂದ ಕೋಳಿ ತರುವುದಕ್ಕಾಗಿ ಕಡಬಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಸ್ತೆಯ ಪಕ್ಕದಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...