ವಿಜಯಪುರಕ್ಕೆ ಪ್ರವೇಶ ನಿರ್ಬಂಧ ಆದೇಶ; ಕಾಡಸಿದ್ದೇಶ್ವರ ಸ್ವಾಮೀಜಿಯ ಅರ್ಜಿ ವಜಾ

Date:

ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ತಮಗೆ ಮೂರು ತಿಂಗಳು ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ಶುಕ್ರವಾರ ವಜಾಗೊಳಿಸಿದೆ. ಈ ಮೂಲಕ ವಿಜಯಪುರಕ್ಕೆ ಪ್ರವೇಶ ನಿರ್ಬಂಧ ಆದೇಶವನ್ನು ಎತ್ತಿಹಿಡಿದಿದೆ.

ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಅಕ್ಟೋಬರ್ 7ರಂದು ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತಾ ಲಿಂಗಾಯತ ಮಠಾಧಿಪತಿಗಳನ್ನು ವ್ಯಂಗ್ಯ ಮಾಡಿದ್ದರು. “ಲಿಂಗಾಯತ ಮಠಾಧಿಪತಿಗಳದ್ದು ಕಲಾವಿದರಿಂದ ಕೂಡಿದ ಒಕ್ಕೂಟ, ಮುಖ್ಯಮಂತ್ರಿಗಳ ಕೃಪಾಪೋಷಿತ ನಾಟಕ ಮಂಡಳಿ. ಇವರು ದೇವರು ಗುಡಿಯಲ್ಲಿ ಇಲ್ಲ, ಗುಡಿಗೆ ಹೋಗಬೇಡಿ. ಹೊಟೇಲ್‌ನಲ್ಲಿ ಸಾರಾಯಿ ಕುಡಿದು, ಆರಾಮಾಗಿರಿ, ಮಾಂಸ ತಿನ್ನಿ ಎಂದು ಜನರಿಗೆ ಹೇಳುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಇದನ್ನು ಓದಿದ್ದೀರಾ? ವಿಜಯಪುರ | ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ವಿಜಯಪುರ ಜಿಲ್ಲಾಧಿಕಾರಿ ಸ್ವಾಮೀಜಿಗೆ ಅಕ್ಟೋಬರ್ 16ರಿಂದ ಡಿಸೆಂಬರ್ 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶಿಸಬಾರದು ಎಂದು ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಕಾಡಸಿದ್ದೇಶ್ವರ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ಏಕಸದಸ್ಯ ಪೀಠವು, “ಸ್ವಾಮೀಜಿ ಸಾಮಾನ್ಯ ಜನರಿಗಿಂತಲೂ ಕೆಳ ಹಂತದ ಭಾಷೆ ಬಳಸಿದ್ದಾರೆ. ಅವರ ಸ್ಥಾನಕ್ಕೆ ಅದು ಶೋಭೆಯಲ್ಲ. ಈಗಾಗಲೇ ಸಮಾಜದಲ್ಲಿ ಅಶಾಂತಿಯಿದೆ. ಹಾಗಿರುವಾಗ ಸ್ವಾಮೀಜಿ ಅಕ್ಟೋಬರ್ 17ರಂದೇ ಏಕೆ ಅಲ್ಲಿಗೆ ತೆರಳಬೇಕು” ಎಂದು ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...