ಕಲಬುರಗಿ | ಟೆಕ್ನಿಕಲ್ ಅಸಿಸ್ಟಂಟ್‌ ವಿಕಾಸ ಸವದಿ ವರ್ಗಾವಣೆ ರದ್ದತಿಗೆ ಆಗ್ರಹ

Date:

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಪಂಚಾಯತಿಯ ಟೆಕ್ನಿಕಲ್ ಅಸಿಸ್ಟಂಟ್‌ (ಟಿ.ಎ) ಆಗಿ ಕಾರ್ಯನಿರ್ವಾಹಿಸುತ್ತಿರುವ ವಿಕಾಸ ಸವದಿ ಅವರ ವರ್ಗಾವಣೆಯನ್ನು ರದ್ದುಗೊಳಿಸಿ, ಅವರು ಶಹಾಬಾದ ತಾಲೂಕಿನಲ್ಲೇ ಕೆಲಸ ಮುಂದುವರೆಸುವಂತೆ ಮಾಡಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ಒತ್ತಾಯಿಸಿದೆ.

ಕಲಬುರಗಿ ಜಿಲ್ಲಾ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಕಾರ್ಯನಿರ್ವಾಕ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಶಹಾಬಾದ ತಾಲೂಕಿನಲ್ಲಿ ಒಟ್ಟು ಏಳು ಗ್ರಾಮ ಪಂಚಾಯತಿಗಳಲ್ಲಿ ಮನರೇಗಾ ಯೋಜನೆ ಸಮರ್ಪಕವಾಗಿ ಜಾರಿ ಮಾಡುವಲ್ಲಿ ಟಿ.ಎ ವಿಕಾಸ ಸದವಿ ಅವರು ಶ್ರಮಿಸಿದ್ದಾರೆ. ಗುಣಮಟ್ಟದ ಕಾಮಗಾರಿಗಳನ್ನು ಮಾಡಿಸುವಲ್ಲಿ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಾಸಿದ್ದಾರೆ. ಬಡ ಕೂಲಿ ಕಾರ್ಮಿಕರ ಪರವಾಗಿ ಕೆಲಸ ಮಾಡಿದ್ದಾರೆ. ಅವರನ್ನು ವರ್ಗಾವಣೆ ಮಾಡಬಾರದು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ಕೆಲ ಚುನಾಯಿತ ಪ್ರತಿನಿಧಿಗಳು ಹಾಗೂ ರಾಜಕಾರಣಿಗಳು ಅವರನ್ನು ಉದೇಶ ಪೂರ್ವಕಾವಾಗಿ ವರ್ಗಾವಣೆ ಮಾಡಿಸಲು ಮುಂದಾಗಿದ್ದಾರೆ. ವಿಕಾಸ್ ಅವರು ಮನರೇಗಾ ಯೋಜನೆಯ ಹಣ ಲೂಟಿ ಮಾಡಲು, ಬೇನಾಮಿ ಹೆಸರಿನಲ್ಲಿ ಹಣ ಪಾವತಿ ಮಾಡಲು ನಿರಾಕರಿಸಿದ ಕಾರಣಕ್ಕೆ ಅವರ ವಿರುದ್ಧ ಸುಳ್ಳು ಆರೋಪ ಮಾಡಿ, ರಾಜಕೀಯ ಒತ್ತಡ ತಂದು ವರ್ಗಾವಣೆ ಮಾಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಚಂದ್ರಪ್ಪ ಹೊಸ್ಕರ್, ಶೇಖಮ ಕುರಿ, ಮಲಮ್ಮ ಕೂಡ್ಲಿ, ಕಾಶಿನಾಥ ಬಂಡಿ, ಸುನಿತಾ ರಂಗ,  ಶ್ರೀದೇವಿ ಬಟಗೇರ ಬಿ, ಗುರುನಂದೇಶ್, ಸಂತೋಷ ಕುಮಾರ್, ಹಣಮಂತ ಕೂಟರಕಿ, ಕವಿತಾ ಬಟಗೇರ.ಕೆ, ಪಾರ್ವತಿ ತರನಳಿ, ಸುನಂದಾ ತರನಳಿ, ಶಿಲ್ಪಾ ಮಲ್ಲು ಮುಗಳನಾಗವ್ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...