ಕಲಬುರಗಿ | ಮಲಘಾಣ ಸರ್ಕಾರಿ ಶಾಲೆಯ 21 ಮಂದಿ ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Date:

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಲಘಾಣ ಸರ್ಕಾರಿ ಶಾಲೆಯ ಐವರು ವಿದ್ಯಾರ್ಥಿಗಳು ಹೊಟ್ಟೆನೋವು, ತಲೆಸುತ್ತು ಕಾಣಿಸಿಕೊಂಡು ಶುಕ್ರವಾರ ಸಂಜೆ ಅಸ್ವಸ್ಥರಾಗಿದ್ದು, ಕಾಳಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಶಾಲೆಗೆ ಬಂದಿರುವ 16 ವಿದ್ಯಾರ್ಥಿಗಳಿಗೂ ಅದೇ ತರಹದ ಹೊಟ್ಟೆ ನೋವು, ತಲೆಸುತ್ತು ಲಕ್ಷಣಗಳು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕರು, ಪಾಲಕರು ಕೂಡಲೇ ಮಕ್ಕಳನ್ನು ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸುತ್ತಿದ್ದಾರೆ.

“ಮಲಘಾಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಶಾಲಾ ಮಕ್ಕಳಿಗೆ ಅಲ್ಪ ಪ್ರಮಾಣದ ಫುಡ್ ಪಾಯಿಸನ್ ಆಗಿರುವುದರಿಂದ ಅಸ್ವಸ್ಥಗೊಂಡಿದ್ದಾರೆ. ಸೂಕ್ತ ಚಿಕಿತ್ಸೆ ನೀಡಲಾಗಿದೆ. ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ. ಜಿಲ್ಲಾ ಕಾಲರಾ ಕಂಟ್ರೋಲ್ ತಂಡ ಶಾಲೆಗೆ ಭೇಟಿ ನೀಡಿದ್ದು, ವರದಿ ಬಂದ ನಂತರ ಕಾರಣ ತಿಳಿಯಲಿದೆ” ಎಂದು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸಂಜಯ ಗೋಳೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಎನ್ ಎನ್ ಅಮೀನ್ ಪಕ್ಕಲಡ್ಕರ ಆನೆ ಬಂತೊಂದಾನೆ ಕಥಾ ಸಂಕಲನ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಬಿಸಿಯೂಟ ಅಧಿಕಾರಿ ಪ್ರಕಾಶ್​ ನೈಕೊಡಿ, ಬಿಆರ್​ಪಿ ರಮೇಶ್​ ಮಠದ, ಗೋಟೂರ ಗ್ರಾ.ಪಂ ಅಧ್ಯಕ್ಷ ಶಿವಕುಮಾರ್​ ಕಮಕನೂರ, ಪಿಡಿಒ ಗುರುನಾಥ್ ರಾಠೋಡ್​, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಕೋರವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಶಾಲೆಗೆ ಆಗಮಿಸಿ, ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ಮಾಡಿದ್ದು, ಮಕ್ಕಳಿಗೆ ಬಿಸಿಯೂಟ ಬಡಿಸದೆ ಬಿಸ್ಕೆಟ್ ಮತ್ತು ಒಆರ್‌ಎಸ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...