ದೀಪಾವಳಿ ಮತ್ತು ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಿಂದ ಬೆಂಗಳೂರು, ಹುಲಿಜಂತಿ ಹಾಗೂ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ 600 ಬಸ್ ಕಾರ್ಯಾಚರಣೆ ನಡೆಸಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ಮಾಹಿತಿ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಅ.16, 17 ಮತ್ತು 18 ರಂದು ಸಂಸ್ಥೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಅಕ್ಟೋಬರ್ 17, 18, ಮತ್ತು 19 ರಂದು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ಪ್ರಾರಂಭಿಸಲಿವೆ. ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರೆಯ ಅ.20,21 ಮತ್ತು 22 ರಂದು ಜಾತ್ರಾ ಸಾರಿಗೆಗಳ ಪ್ರಯೋಜನವನ್ನು ಭಕ್ತರು ಪಡೆಯಬಹುದಾಗಿದೆ. ಇನ್ನೂ ಹಬ್ಬ ಮತ್ತು ರಜೆ ಮುಗಿದ ನಂತರ ಅ.22 ರಿಂದ 26ರವರೆಗೆ ಸಹ ಸಂಚಾರ ದಟ್ಟಣೆಗನುಗುಣವಾಗಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಕಲಬುರಗಿ | ಬಂದ್‌ಗೆ ಉತ್ತಮ ಸ್ಪಂದನೆ; ಒಟ್ಟಾಗಿ ಬೆಂಬಲ ನೀಡಿದ ಸಂಘಟನೆಗಳು
ಸಾರ್ವಜನಿಕರು 4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





