ಕಲಬುರಗಿ | ಮಕ್ಕಳ ಕೈಯಲ್ಲಿ ತಲ್ವಾರ್ ಕೊಡಿ ಎಂದಿದ್ದ ಮರುಳಾರಾಧ್ಯ ಶ್ರೀ ವಿರುದ್ಧ ಪ್ರಕರಣ ದಾಖಲು

Date:

ʼಮಕ್ಕಳ ಕೈಯಲ್ಲಿ ಪೆನ್ನು ನೀಡುವ ಬದಲು ತಲ್ವಾರು ಕೊಡಿʼ ಎಂದು ಪ್ರಚೋದನಾತ್ಮಕ ಮಾಶಾಳ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಕ್ಫ್ ಹಠಾವೊ ದೇಶ ಬಚಾವೊ ಹೋರಾಟದಲ್ಲಿ ಭಾಗಿಯಾಗಿದ ಶ್ರೀಗಳು ಭಾಷಣ ಮಾಡುವ ಭರದಲ್ಲಿ ವಕ್ಫ ಬೋರ್ಡ್‌ ತೆಗೆಯದಿದ್ದರೆ ನಾವು ಜೀವ ಕೊಡುವುದಕ್ಕೂ ಸಿದ್ಧರಿದ್ದೇವೆ, ಜೀವ ತೆಗೆಯಲಿಕ್ಕೂ ಸಿದ್ಧದಿದ್ದೇವೆ ಎಂದರು.

ʼಎಲ್ಲ ಯುವಕರ ಬಳಿ ತಲ್ವಾರುಗಳಿವೆ. ಯಾರು ಬರುತ್ತಾರೋ ಅವರನ್ನು ತಲ್ವಾರುಗಳಿಂದ ಕಡಿಯುತ್ತೇವೆ ಎನ್ನುತ್ತಿದ್ದಾರೆ. ಹಾಗಾಗಿ, ಇನ್ನು ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡೋಣ ಎಂದಿದ್ದರು, ಇದನ್ನು ಬಿಎನ್‌ಎಸ್ ಕಾಯ್ದೆಯ ಅನುಸಾರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...