ಕಲಬುರಗಿ | ಅಮಾನವೀಯವಾಗಿ ಕಾರ್ಮಿಕನ ಮೃತ ದೇಹ ಎಳೆದೊಯ್ದ ಪ್ರಕರಣ; ಸಿಪಿಐಎಂ ಖಂಡನೆ

Date:

ಕಲಬುರಗಿಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಬಳಿ ಸಿಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕನ ಮೃತ ದೇಹವನ್ನು ಪ್ರಾಣಿಯ ರೀತಿ ಅಮಾನವೀಯವಾಗಿ ಎಳೆದೊಯ್ದಿರುವುದು ಅತ್ಯಂತ ಖಂಡನೀಯ ಎಂದು ಭಾರತ ಕಮ್ಯುನಿಸ್ಟ್‌ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಭಿಪ್ರಾಯಪಟ್ಟರು.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದ ಚಂದನಸಿಂಗ್ (34) ಎಂಬ ಕಾರ್ಮಿಕ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿಟ್ಟಿದ್ದ. ಅವನ ದೇಹವನ್ನು ರಸ್ತೆಯ ಮೇಲಿನಿಂದ ಪ್ರಾಣಿಗಳ ದೇಹದಂತೆ ಎಳೆದೊಯ್ಯಲಾಗಿದೆ. ಮೃತ ದೇಹವನ್ನು ಗೌರವಯುತವಾಗಿ ಸಾಗಿಸಬೇಕಾದ ವ್ಯವಸ್ಥೆ ಮಾಡಬೇಕಾಗಿರುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ. ತನ್ನ ಜವಾಬ್ದಾರಿ ನಿಭಾಯಿಸದ ಆಡಳಿತ ಮಂಡಳಿಯು ಇಂತಹ ಅಮಾನವೀಯತೆಗೆ ಕಾರಣವಾಗಿದೆ. ಸಿಪಿಐಎಂ ಪಕ್ಷ ಈ ಅಮಾನವೀಯತೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಿಮೆಂಟ್ ಕಾರ್ಖಾನೆಯ ಮಾಲಿಕರ ಕಾರ್ಮಿಕ ವಿರೋಧಿ ನಡೆ ಕ್ರೌರ್ಯದ ಧೋರಣೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಕಾರ್ಮಿಕನ ಮೃತದೇಹವನ್ನು ಪ್ರಾಣಿ ರೀತಿ ಎಳೆದೊಯ್ದು ವಿಕೃತಿ ಮೆರೆದ ಸಿಮೆಂಟ್ ಕಂಪನಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ನೀತಿ ವಿರುದ್ಧವಾಗಿ ನಡೆದುಕೊಂಡಿರುವ ಶ್ರೀ ಸಿಮೆಂಟ್‌ ಕಾರ್ಖಾನೆಯ ಮಾಲಿಕರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಹಾಗೂ ಮೃತ ಕಾರ್ಮಿಕನ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರಧನ ಒದಗಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾ ಆಡಳಿತ ಮತ್ತು ಕಾರ್ಮಿಕ ಇಲಾಖೆಯು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...