ಕಲಬುರಗಿ | ಬಹುತ್ವ ಸಂಸ್ಕೃತಿ ಭಾರತೋತ್ಸವ-2025; ಸೌಹಾರ್ದ ಕರ್ನಾಟಕದ ಬೃಹತ್ ಬೈಕ್ ರ್‍ಯಾಲಿ ಯಶಸ್ವಿ

Date:

ಬಹುತ್ವ ಸಂಸ್ಕೃತಿ ಭಾರತೋತ್ಸವ-2025ರ ಚಲೋ ಕಲಬುರಗಿ ಕಾರ್ಯಕ್ರಮದ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅಧಿಕೃತವಾಗಿ ಚಾಲನೆ ನೀಡಿ, ನಡೆಸಿದ ಬೈಕ್ ರ್‍ಯಾಲಿ ಯಶಸ್ವಿಯಾಗಿದೆ.

ಬೆಳಗ್ಗೆ 11ಗಂಟೆಗೆ ದೇವಸ್ಥಾನದ ಆವರಣದಲ್ಲಿ ಸಂಸ್ಥಾನದ ಮಾತೋಶ್ರೀ ದಾಕ್ಷಾಯಿಣಿ ಶರಣಬಸಪ್ಪ ಹಾಗೂ ನಿವೃತ್ತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರು ಬಹುತ್ವ ಸಂಸ್ಕೃತಿ ಭಾರತೋತ್ಸವದ ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

be2dd4ef 1f04 4f4d 9441 32b89515400e

ಚಾಲನೆ ನೀಡಿ ದಾಕ್ಷಾಯಿಣಿ ಶರಣಬಸಪ್ಪ ಮಾತನಾಡಿ, “ಭವಿಷ್ಯಕ್ಕಾಗಿ ಬಹುತ್ವ ಭಾರತ ಉಳಿಸುವುದು ಅಗತ್ಯವಾಗಿದ್ದು, ಇದಕ್ಕೆ ಸಂಸ್ಥಾನ ಸಂಪೂರ್ಣ ಸಹಕಾರ ನೀಡುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಸ್ಥಾನದ ಮುಂಭಾಗದಿಂದ ಪ್ರಾರಂಭಗೊಂಡ ರ್‍ಯಾಲಿ ಸೇಂಟ್ ಮೇರಿ ಚರ್ಚ್ ಮಾರ್ಗವಾಗಿ ಸಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮಾರ್ಗ, ಜಗತ್ ವೃತ್ತದಿಂದ ಹಾಯ್ದು ಸೌಹಾರ್ದ ಸಂಕೇತವಾದ ಖಾಜಾ ಬಂದೇನವಾಜ್ ದರ್ಗಾದಲ್ಲಿ ಮುಕ್ತಾಯವಾಯಿತು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

ಜಾಥಾದಲ್ಲಿ ಕೆ ನೀಲಾ, ಆರ್ ಕೆ ಹುಡಗಿ, ಮೀನಾಕ್ಷಿ ಬಾಳಿ, ಸುರೇಶ್ ಹಾದಿಮನಿ, ಮಹಮ್ಮದ್ ಅಫಜಲ್, ಅಬ್ದುಲ್ ಖಾದರ್, ಕಾಶಿನಾಥ್ ಅಂಬಲಗೆ, ಪ್ರಭು ಖಾನಾಪುರ, ಅಬ್ದುಲ್ ರಹೀಂ, ರಿಜ್ವಾನ್ ಸಿದ್ದಿಕಿ, ಶಾಹನಾಜ್ ಅಖರ್, ದತ್ತಾತ್ರೇಯ ಇಕ್ಕಳಕಿ, ಮಹಾಂತೇಶ್ ಕಲಬುರಗಿ, ಮುಬೀನ್ ಅಹ್ಮದ್, ಲವಿತ್ರಾ ರಾಜೇಂದ್ರ ರಾಜವಾಳ್, ವಸ್ತ್ರದ್, ಅರ್ಜುನ್ ಗೊಬ್ಬರ್, ಶ್ರೀನಾಥ್ ಬಿರಾದಾರ, ಗೌರಮ್ಮ ಪಾಟೀಲ್ ಸೇರಿದಂತೆ ವಿವಿಧ ಧರ್ಮಗಳ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...