ಕಲಬುರಗಿ | ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿ ವಶ

Date:

ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28) ಸೂಕ್ತ ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.

ಇವುಗಳ ಒಟ್ಟಾರೆ ಮೌಲ್ಯ 6,37,670 ರೂ. ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಬಿ. ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಪ್ರಯುಕ್ತ ಅಕ್ರಮ ತಡೆಯಲು ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಚುನಾವಣೆ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...