ಕಲಬುರಗಿ | ವಿಚಿತ್ರ ಪ್ರತಿಭಟನೆ; ರಕ್ತದಿಂದ ಸಹಿ ಮಾಡಿ ಸರ್ಕಾರಕ್ಕೆ ಮನವಿ

Date:

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ರಕ್ತದಿಂದ ಸಹಿ ಸಂಗ್ರಹ ಮಾಡಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವಿಚಿತ್ರವಾಗಿ ಮನವಿ ಸಲ್ಲಿಸಿತು.

ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, “ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 15-20 ವರ್ಷಗಳಿಂದ ದುಡಿಯುತ್ತಿರುವ ನೌಕರರು ಅತ್ಯಂತ ಕಡಿಮೆ ವೇತನ ಪಡೆಯುತ್ತಿದ್ದಾರೆ. ಜತೆಗೆ ಏಜೆನ್ಸಿಗಳು ಒತ್ತಡದಿಂದ ಸಿಬ್ಬಂದಿಗಳನ್ನೂ ಕಡಿತ ಮಾಡಿದ್ದರಿಂದ ಕೆಲಸದ ಹೊರೆ ಹೆಚ್ಚಾಗಿ ಅನಾರೋಗ್ಯದಿಂದ ಬಳಲುವಂತಾಗಿದೆ. ಇತ್ತ ಸಮಯಕ್ಕೆ ಸರಿಯಾಗಿ ವೇತನ ಕೂಡಾ ಪಾವತಿಯಾಗುತ್ತಿಲ್ಲ. ಈ ಕಡೆ ವೇತನವೂ ಇಲ್ಲ, ಆ ಕಡೆ ಬರುವ ವೇತನವೂ ಸರಿಯಾದ ಸಮಯಕ್ಕೂ ಬರುತ್ತಿಲ್ಲ. ಇದರಿಂದ ನೌಕರರು ಸಂಕಷ್ಟದಲ್ಲಿ ಪರದಾಡುವಂತಾಗಿದೆ” ಎಂದು ಅಸಮಾಧಾನಗೊಂಡರು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತಮ್ಮ ನ್ಯಾಯುತವಾದ ಬೇಡಿಕೆಗಳಿಗಾಗಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಬಳ್ಳಾರಿ, ವಿಜಯನಗರ, ವಿಜಾಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಬೀದರ್ ಮಾದರಿಯಲ್ಲಿ ಸಹಕಾರ ಸಂಘ ರಚಿಸಿ ವೇತನ ಪಾವತಿಸುವುದಾಗಿ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಆದರೆ ಕಲಬುರಗಿ ಜಿಲ್ಲೆಯಲ್ಲಿ 25 ದಿನಗಳಿಂದ ನೂರಾರು ಮಹಿಳೆಯರು ಅಹೋರಾತ್ರಿ ಧರಣಿ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಜಿಲ್ಲಾಡಳಿತ ಇತ್ತ ಗಮನಹರಿಸುತ್ತಿಲ್ಲ” ಎಂದು ಸಂಘದ ಮುಖಂಡರು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕಲಬುರಗಿ| ವಿದ್ಯಾರ್ಥಿಗಳಿಗಾಗಿ ಆನಾಪಾನ ಧ್ಯಾನ ಕಾರ್ಯಕ್ರಮ

ಈ ವೇಳೆ ಸಂಘದ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಬಂಡಿ, ರಾಜ್ಯ ಜಂಟಿ ಕಾರ್ಯದರ್ಶಿ ಹುಲಗಣಾ ಚಲವಾದಿ, ಜೇವರ್ಗಿ ತಾಲೂಕು ಅಧ್ಯಕ್ಷ ಕಲ್ಯಾಣಿ ಪೂಜಾರಿ, ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ, ಸೇಡಂ ತಾಲೂಕು ಅಧ್ಯಕ್ಷ ನರಸಮ್ಮ ಕೊರಡಂಪಳ್ಳಿ, ಚಿಂಚೋಳಿ ತಾಲೂಕು ಕಾರ್ಯದರ್ಶಿ ಸಂಜುಕುಮಾರ ಮೇತ್ರ, ಬಾಬು ಹೊಸಮನಿ ಇನ್ನಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...