ಕಲಬುರಗಿ | 15ನೇ ಹಣಕಾಸು ನಿಧಿ ದುರ್ಬಳಕೆ ಆರೋಪ : ಗ್ರಾ.ಪಂ ಮುತ್ತಿಗೆ ಹಾಕಿ ಪ್ರತಿಭಟನೆ

Date:

ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ನಿಧಿ ದುರ್ಬಳಕೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಸೋಮವಾರ ಆದರ್ಶ ಗ್ರಾಮ ಸಮಿತಿ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಯಾಳವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವಾರು ಹಳ್ಳಿಗಳ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ, ನಿಧಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಬಳಿಕ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

488986

ಆದರ್ಶ ಗ್ರಾಮ ಸಮಿತಿ ಅಧ್ಯಕ್ಷ ಇಬ್ರಾಹಿಂ ಪಟೇಲ್ ಮಾಲಿ ಮಾತನಾಡಿ, “2024–25 ಮತ್ತು 2025–26 ನೇ ಸಾಲಿನ 15ನೇ ಹಣಕಾಸು ಆಯೋಗ ಹಾಗೂ ಕರವಸೂಲಿ ನಿಧಿಗಳ ಅಡಿಯಲ್ಲಿ ಬಂದ ಸುಮಾರು ₹1.70 ಲಕ್ಷ ಮೊತ್ತವನ್ನು ಯಾವುದೇ ಕಾಮಗಾರಿ ಕೈಗೊಳ್ಳದೆ ದುರ್ಬಳಕೆ ಮಾಡಲಾಗಿದೆ. ನಿಯಮ ಉಲ್ಲಂಘನೆಯ ಈ ಘಟನೆಗೆ ಸಂಬಂಧಿಸಿದಂತೆ ಇಲಾಖೆಯು ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ದುರ್ಬಳಕೆಯಾದ ಹಣ ವಸೂಲಿ ಮಾಡುವ ಜೊತೆಗೆ ಸಂಬಂಧಪಟ್ಟ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಬೇಕು,” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ಬೆಳೆ ನಾಶ ಜಿಲ್ಲೆಯನ್ನು ಹಸಿ ಬರವೆಂದು ಘೋಷಿಸಿ, ಸಾಲ ಮನ್ನಾ ಮಾಡುವಂತೆ ರೈತ ಸಂಘದ ಆಗ್ರಹ

ಅವರು ಮುಂದುವರಿಸಿ, “ಸಾರ್ವಜನಿಕ ಶೌಚಾಲಯ, ರಸ್ತೆ ಕಾಮಗಾರಿ, ಉದ್ಯೋಗ ಖಾತ್ರಿ ಯೋಜನೆ, ಮನೆ ನೊಂದಣಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಿಂತ ಸ್ಥಿತಿಯಲ್ಲಿವೆ. ಈ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಾ. ಮಹೇಶ್ ಕುಮಾರ ರಾಠೋಡ್, ರಾಜಾ ಪಟೇಲ್, ಮಹ್ಮದ್ ಚೌಧರಿ ಕೊಡಚಿ, ಸದ್ದಾಂ ಪಟೇಲ್ ಚಿಗರಹಳ್ಳಿ, ಶರಣು ದೊಡ್ಡಮನಿ, ಮಲ್ಕಣ್ಣ, ಮಲ್ಕಪ್ಪ, ಬಾಬು ಬಿ. ಪಟೇಲ್, ಶಂಕರಲಿಂಗ, ಅಖಿಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...