ಕಲಬುರಗಿ | ಗುಲಾಬ್‌ವಾಡಿ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ದುರಸ್ತಿಗೆ ಎಐಡಿಎಸ್ಒ ಆಗ್ರಹ

Date:

ಕಲಬುರಗಿ ನಗರದ ಕೂಲಿಕಾರ್ಮಿಕರು, ಕಟ್ಟಡ ಕಾರ್ಮಿಕರು ವಾಸಿಸುತ್ತಿರುವ ಗುಲಾಬ್‌ವಾಡಿ ಕಾಲೋನಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಎಐಡಿಎಸ್‌ಒ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ಕಲಬುರಗಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕರಿಗೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿದರು.

ʼಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಶಾಲೆಯ ಕಟ್ಟಡದ ಮೇಲ್ಚಾವಣಿ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ಸೋರುತ್ತದೆ. ಶೌಚಾಲಯಗಳಿದ್ದರೂ ಸೂಕ್ತ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಅವು ಉಪಯೋಗಕ್ಕೆ ಬಾರದಂತಾಗಿವೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಡ, ಕೂಲಿಕಾರ್ಮಿಕರ ಮಕ್ಕಳು ವ್ಯಾಸಂಗ ಮಾಡುವ ಈ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಕೋಣೆಗಳಿಲ್ಲ. ಕನಿಷ್ಠ ಸೌಕರ್ಯವಿಲ್ಲ ಮಳೆ ಬಂದರೆ ಸೋರುವುದು ಸಾಮಾನ್ಯ ಎನ್ನುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲೇ ಭೇಟಿ ನೀಡಿ ಪರಿಶೀಲಿಸಿ, ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಎಐಡಿಎಸ್ಓ ಕಲಬುರಗಿ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ಜಿಲ್ಲಾ ಸಮಿತಿ ಸದಸ್ಯರಾದ ರಾಹುಲ್, ಯುವರಾಜ್, ದೇವರಾಜ್, ಸ್ಪೂರ್ತಿ ಹಾಗೂ ಸ್ಥಳೀಯ ನಿವಾಸಿಗಳಾದ ಲಕ್ಷ್ಮಿ, ಜಗದೇವಿ ಮತ್ತಿತರರಿದ್ದರು.

ಇದನ್ನೂ ಓದಿ : ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ : ಫ್ರಿಕ್ವೆನ್ಸಿ ಕಡಿತಕ್ಕೆ ಗ್ರಾಮಸ್ಥರ ಒತ್ತಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...