ಕಲಬುರಗಿ | ವಿದ್ಯಾರ್ಥಿಗಳಿಗೆ, ಶಾಲೆ-ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಒದಗಿಸಿವಂತೆ ಎಐಡಿಎಸ್‌ಒ ಆಗ್ರಹ

Date:

ಕಲಬುರಗಿ ಜಿಲ್ಲೆಯಾದ್ಯಂತ ಹಲವು ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಐಡಿಎಸ್ಒ ನೆತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಾರಿಗೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.

ಎಐಡಿಎಸ್‌ಒ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡಿ, “ದೂರದ ಹಲವಾರು ಹಳ್ಳಿ-ಪಟ್ಟಣಗಳಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಕಲಬುರಗಿ ನಗರಕ್ಕೆ ಬರುತ್ತಾರೆ. ಆದರೆ ಜಿಲ್ಲೆಯಾದ್ಯಂತ ಹಲವಾರು ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದಿರುವುದರಿಂದಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲಾಗುತ್ತಿಲ್ಲ. ಹಳ್ಳಿಗಳಿಂದ ಬರುವ ಕೆಲವೇ ಬಸ್‌ಗಳಲ್ಲಿ ನಿಲ್ಲಲು ಜಾಗವಿಲ್ಲದಂತೆ ತುಂಬಿ ಬರುತ್ತವೆ. ನಿತ್ಯವೂ ವಿದ್ಯಾರ್ಥಿಗಳು ಜೀವ ಭಯದಿಂದಲೇ ಪ್ರಯಾಣ ಬೆಳೆಸುತ್ತಿದ್ದಾರೆ. ಹಲವಾರು ಸಲ ಅಪಘಾತಗಳು ಕೂಡ ಸಂಭವಿಸಿವೆ. ಇದರ ಬಗ್ಗೆ ಅಧಿಕಾರಿಗಳ ಗಮನಕ್ಕೆ ಬಂದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ ಮಾತನಾಡಿ, “ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಲ್ಲ ರೀತಿಯ ಅನುಕೂಲ ಮಾಡಿಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಬೇಕು. ಆದರೆ ಎಷ್ಟೋ ಹಳ್ಳಿಗಳಿಗೆ ಕನಿಷ್ಟ ಬಸ್ ಸೌಲಭ್ಯವಿಲ್ಲದೆ ಇರುವುದರಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳು ಈ ಸಮಸ್ಯೆಗಳ ತೀವ್ರತೆಯ ಬಗ್ಗೆ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಶಿಕ್ಷಣದ ಹಿತದೃಷ್ಟಿಯಿಂದ ಕೂಡಲೇ ಎಲ್ಲ ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ, ಅವಶ್ಯಕತೆಗೆ ತಕ್ಕಷ್ಟು ಬಸ್ ಸೌಲಭ್ಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1. ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲ ಹಳ್ಳಿಗಳಿಗೂ ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸಬೇಕು.
2. ಹೊಸಳ್ಳಿ, ಹೊಲ್ಲೂರು, ಕೋಗನೂರು, ಕೊಂಚೂರು, ಇಂಗನಕಲ್, ಮಲಕ್ಪಲ್ಲಿ, ಹರಕಂಚಿ, ಫಿರೋಜಾಬಾದ್, ಅಪ್ಪಚಂದ್, ಗೌಡ್ ಗೌನ್, ಕಡಬೂರ, ಇವಣಿ, ಹಿಪ್ಪರಗಾ ಎಸ್‌ ಎನ್‌, ರಾಮನಗುಡ ಹಳ್ಳಿಗಳಿಗೆ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಬೇಕು.
3. ವಿದ್ಯಾರ್ಥಿಗಳ ಶಾಲಾ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಒದಗಿಸಬೇಕು.
4. ಭೀಮಳ್ಳಿ , ವಾಡಿ, ಸ್ಟೇಷನ್ ಗಣಗಾಪುರ, ಸಿಂದಗಿ ಬಿ, ಬಂಗರಗಾ, ದಂಗಾಪುರ, ಗುಂಡ ಗುರುತಿ, ಕಣಮುಸ್, ಕಲಗುರುತಿ, ಜವಳಿ, ಸಾವಳಗಿ ಹಲವಾರು ಹಳ್ಳಿಗಳಿಗೆ ಶಾಲಾ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಒದಗಿಸಬೇಕು.
5. ನಂದೂರ್ ಕೆ, ಮುಗುಟಾ, ಶರಣ ಸಿರಸಿಗಿ, ಮಾಹಾಗಾಂವ್ ಕ್ರಾಸ್, ತಿಳಗೊಳ್ ಹಲವಾರು ಹಳ್ಳಿಗಳ ಮಾರ್ಗದಿಂದ ಹೊರಡುವ ಎಲ್ಲ ಬಸ್‌ಗಳು ನಿಲ್ಲುವ ವ್ಯವಸ್ಥೆ ಆಗಬೇಕು.
6. ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ, ಮಧ್ಯಾಹ್ನ 2:30ರಿಂದ 4ರವರೆಗೆ ಕೇಂದ್ರ ಬಸ್ ನಿಲ್ದಾಣದಿಂದ ಮಾರ್ಕೆಟ್‌ಗೆ ಹೊರಡುವ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ವಿತರಣೆಗೆ ಹೆಚ್ಚಿನ ಹಣ ವಸೂಲಿ; ಆರೋಪ

ಈ ಸಂದರ್ಭದಲ್ಲಿ ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷ ನಾಗರಾಜ್ ರಾವೂರ್, ಸದಸ್ಯರಾದ, ಸಿದ್ದಾರ್ಥ್ ತಿಪ್ಪನೋರ, ಯುವರಾಜ ರಾಠೋಡ, ತುಳಜರಾಮ ಎನ್ ಕೆ, ಜಿಲ್ಲಾ ಕಾರ್ಯದರ್ಶಿ ಪ್ರೀತಿ, ದೊಡ್ಡಮನಿ, ಬಾಬು, ಅಜಯ್, ಸ್ಪೂರ್ತಿ, ರಮೇಶ್ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...