ಕಲಬುರಗಿ | ಸರ್ಕಾರಿ ಶಾಲೆ ಮುಚ್ಚಲು ಮುಂದಾಗಿರುವ ಕಾಂಗ್ರೆಸ್‌ ನಡೆ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

Date:

ಹಬ್ ಹ್ಯಾಂಡ್ ಸ್ಪೋಕ್‌ ಹೆಸರಿನಲ್ಲಿ ಅತಿ ಕಡಿಮೆ ದಾಖಲಾತಿ ಹೊಂದಿರುವ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ಈಗಿನ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಖಂಡಿಸಿ ಎಐಡಿಎಸ್ಒ ಚಿತ್ರಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.

ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷ ಗೋವಿಂದ ಎಳವಾರ ಮಾತನಾಡಿ, “ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಇದೇ ನೆಪವೊಡ್ಡಿ ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡಲು ಎನ್‌ಇಪಿ-2020 ನೀತಿ ತಂದಿತ್ತು. ಈ ನೀತಿಯ ಪರಿಣಾಮವಾಗಿ ಕರ್ನಾಟಕ ರಾಜ್ಯದಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಇದನ್ನು ವಿರೋಧಿಸಿ ಎಐಡಿಎಸ್ಓ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ಜಿಲ್ಲೆಯಾದ್ಯಂತ 7 ಲಕ್ಷಕ್ಕೂ ಹೆಚ್ಚು ಹಾಗೂ ರಾಜ್ಯಾದ್ಯಂತ 36 ಲಕ್ಷ ಸಹಿಗಳನ್ನು ಸಂಗ್ರಹಿಸಿ ನಡೆದ ಹೋರಾಟದಿಂದಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚವ ನಿರ್ಧಾರ ಕೈಬಿಟ್ಟಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಜಾರಿ ಮಾಡಿ, ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ನಡೆಸಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು ಅವೈಜ್ಞಾನಿಕ ಮತ್ತು ಪ್ರಜಾತಾಂತ್ರಿಕ ಜನ ವಿರೋಧಿ ನಿರ್ಧಾರವಾಗಿದೆ. ಕೂಡಲೇ ಈ ನಿರ್ಧಾರ ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳಿಗೆ ಅವಶ್ಯಕ ಸೌಲಭ್ಯಗಳನ್ನು ನೀಡಿ‌ ರಕ್ಷಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಸಂವಿಧಾನ ಕುರಿತು ಅವಹೇಳನಾಕಾರಿ ಹೇಳಿಕೆ; ರಾಷ್ಟ್ರದ್ರೋಹ ಕೇಸ್ ದಾಖಲಿಸಲು ದಸಂಸ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ಸಿದ್ದಾರ್ಥ ತಿಪ್ಪನೋರ್, ಸದಸ್ಯರಾದ ಜೈ ಭೀಮ್ ದಾಸ್, ಮೋಹನ್ ಅಕ್ಕಿ, ಸುದೀಪ್ ನಾಲವಾರಕರ್, ಜೈ ಭೀಮ್ ಪರರ್ತುಕರ್ ಸೇರಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...