ಕಲಬುರಗಿ | ಸರಕಾರ ಶಾಲೆ ಉಳಿಸಲು ಎಐಡಿಎಸ್‌ಒ ಬೃಹತ್ ಪ್ರತಿಭಟನೆ

Date:

ಕರ್ನಾಟಕ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಎಐಡಿಎಸ್‌ಒ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ಜಿಲ್ಲಾ ಜಂಟಿ ಕಾರ್ಯದರ್ಶಿ ಬಾಬು ಪವರ್ ಅಧ್ಯಕ್ಷತೆಯಲ್ಲಿ ಪೋಷಕರು,ವಿದ್ಯಾರ್ಥಿಗಳು ಶಾಹಬಾದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಾಲ್ಲೂಕು ದಂಡಾಧಿಕಾರಿಗಳ ಮುಖಾಂತರ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್ ಕೆ ಅವರು ಮಾತನಾಡಿ, ‘ಸರ್ಕಾರಿ ಶಿಕ್ಷಣ ಬಲಪಡಿಸುವ ಬದಲು ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ. ಗುಣಮಟ್ಟ ಮತ್ತು ಮಾದರಿ ಶಾಲೆಗಳ ಸುಳ್ಳು ಆಮಿಷದ ಹಿಂದೆ ಶಿಕ್ಷಣವನ್ನು ಕಾರ್ಪೊರೇಟ್‌ಗಳಿಗೆ ಒಪ್ಪಿಸುವ ರಾಜಕೀಯ ಅಜಂಡಾ ಇದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಹೇಳಿದರು, ‘ಬಡ ಮಕ್ಕಳ ಓದುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದು ಸರ್ಕಾರದ ಬಡವಿರೋಧಿ ಧೋರಣೆ. ಉಚಿತ ಸಾರಿಗೆ ಹೆಸರಿನಲ್ಲಿ ಹೊರೆ ಪೋಷಕರ ಮೇಲೆ ಬಿದ್ದಿದೆ. ಶಾಲೆಗಳು ಸ್ವಂತ ಆದಾಯ ಹುಡುಕಬೇಕು ಎಂಬ ನಿರ್ದೇಶನವು ಉಚಿತ ಮತ್ತು ಸಮಾನ ಶಿಕ್ಷಣ ತತ್ತ್ವದ ವಿರುದ್ಧವಾಗಿದೆ’ ಎಂದರು.

ತರನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮ್ಯಾಗ್ನೆಟ್ ಶಾಲೆಗೊಳಿಸಿರುವುದರಿಂದ ಶಂಕರಲಿಂಗ ಗುಡಿ, ಹಳೆ ಶಹಾಬಾದ್ ಉರ್ದು, ಆಶ್ರಯಕಾಲೋನಿ ರಾಮಘಾಡ, ಶಿಬಿರಕಟ್ಟಿ ಹಿರಿಯ ಪ್ರಾಥಮಿಕ ಶಾಲೆಗಳು ವಿಲೀನಕ್ಕೆ ಒಳಗಾಗುತ್ತಿವೆ. ಪ್ರತಿಭಟನಾಕಾರರು ಈ ಶಾಲೆಗಳು ಮುಚ್ಚುವ ಅಪಾಯ ಎದುರಿಸುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಬೀದರ್‌ | ಹಿಂದೂಗಳು ನಮ್ಮ ಶತ್ರುಗಳಲ್ಲ, ನಮ್ಮ ಶತ್ರು ಆರ್‌ಎಸ್‌ಎಸ್‌: ನಿವೃತ್ತ ನ್ಯಾ.ಬಿ.ಜಿ ಕೋಲ್ಸೆ

ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನವೋದಯ ಹಾಗೂ ಸ್ವಾತಂತ್ರ್ಯ ಹೋರಾಟದ ನಾಯಕರ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.

ಜಿಲ್ಲಾ ಖಜಾಂಚಿ ಸ್ಪೂರ್ತಿ ಗುರುಜಲ್ಕರ್, ಜಂಟಿ ಕಾರ್ಯದರ್ಶಿ ದೇವರಾಜ್ ರಾಜೋಳ, ರಾಹುಲ್ ಜಾಧವ್, ಬೃಂದಾ ಎಸ್.ಜಿ, ಶೃಷ್ಟಿ ಇಆರ್‌ಜಿ ಮತ್ತು ಪೋಷಕರು ಕನಕ ಶಿಬಿರಕಟ್ಟಿ, ಸಿದ್ದು, ರಘು ಪವರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...