ಕಲಬುರಗಿ | ರೈಲ್ವೆ ದರ ಕಡಿತಗೊಳಿಸಿ, ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಎಐಡಿವೈಓ ಆಗ್ರಹ

Date:

ಕಲಬುರಗಿ ಮತ್ತು ಬೆಂಗಳೂರು ಕಡೆ ಚಲಿಸುವ ರೈಲ್ವೆಗಳ ಸಂಖ್ಯೆ ಹೆಚ್ಚಿಸಲು, ಜನರಲ್ ಮತ್ತು ಸ್ಲೀಪರ್ ಬೋಗಿಗಳು ಹೆಚ್ಚಿಸುವಂತೆ ಹಾಗೂ ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓ ಸಂಘಟಕರು ಆಗ್ರಹಿಸಿದರು.

ಜನಸಾಮಾನ್ಯರ ಸಹಿ ಸಂಗ್ರಹದ ಅಂಗವಾಗಿ ಕಲಬುರಗಿಯ ಶಹಾಬಾದ ರೈಲ್ವೆ ನಿಲ್ದಾಣದ ಎದುರುಗಡೆ ಎಐಡಿವೈಓ ಯುವಜನ ಸಂಘಟಕರು ಜನರ ಸಹಿ ಸಂಗ್ರಹಣೆ ಮಾಡಿದರು.

ಜಿಲ್ಲಾಧ್ಯಕ್ಷ ಜಗನ್ನಾಥ ಎಸ್ ಹೆಚ್ ಮಾತನಾಡಿ, ಭಾರತೀಯ ರೈಲ್ವೆಯು ಸಂಪೂರ್ಣ ವಿನಾಶದತ್ತ ಸಾಗುತ್ತಿದ್ದು, ಕಳೆದ ಒಂದು ದಶಕದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳಿಂದ ಪ್ರತಿ ವರ್ಷ ತೀವ್ರಗೊಳ್ಳುತ್ತಿದೆ. ಖಾಸಗೀಕರಣ ಮತ್ತು ವ್ಯಾಪಾರೀಕರಣದ ಕ್ರಮಗಳು ರೈಲ್ವೆ ಪ್ರಯಾಣಿಕರನ್ನು ಬೆಂಕಿಗೆ ತಳ್ಳಿವೆ. ಇತ್ತೀಚಿನ ದಿನಗಳಲ್ಲಿ ರೈಲ್ವೆ ಪ್ರಯಾಣದಲ್ಲಿ ಸುರಕ್ಷತೆ ತೀವ್ರ ಆತಂಕಕಾರಿಯಾಗಿದ್ದು, ಪ್ರಯಾಣಿಕರ ಸುರಕ್ಷತೆಗೆ ಯಾವುದೇ ಖಾತರಿ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಲಬುರಗಿ

2023ರ ಅಂಕಿ-ಅಂಶಗಳ ಪ್ರಕಾರ ಸುರಕ್ಷತಾ ವಿಭಾಗಗಳಲ್ಲೇ 1.7 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಹೇಳಲಾಗಿದ್ದು, ಉಲ್ಬಣಗೊಳ್ಳುತ್ತಿರುವ ನಿರುದ್ಯೋಗದಿಂದಾಗಿ, ದೇಶದ ಮೂಲೆ-ಮೂಲೆಗಳಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ವಲಸೆ ಕಾರ್ಮಿಕರು, ಕೈಗಾರಿಕೆಗಳು, ಕಟ್ಟಡ ನಿರ್ಮಾಣ, ಖಾಸಗಿ ವಲಯಗಳಲ್ಲಿ ದಿನಗೂಳಂತೆ ದುಡಿಯುತ್ತಿದ್ದಾರೆ. ಅಂಗಡಿ, ಹೋಟೆಲ್‌, ಸಣ್ಣ ಕಾರ್ಖಾನೆ, ಕೃಷಿಯಲ್ಲಿಯೂ ಅವರನ್ನು ಅಗ್ಗದ ಕೂಲಿ ಕಾರ್ಮಿಕರನ್ನಾಗಿ ದುಡಿಸಿಕೊಂಡು ಶೋಷಣೆ ಮಾಡಲಾಗುತ್ತಿದೆ ಎಂದರು.

ವಲಸೆ ಕಾರ್ಮಿಕರೇ ಇಂದು ದೂರ ಪ್ರಯಾಣದ ರೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸತ್ತಿರುವ ಪರಿಣಾಮ, ಪ್ರತಿ ರೈಲು ಜನದಟ್ಟಣೆಯಿಂದ ಓಡುತ್ತಿವೆ. ಇದರ ನಿವಾರಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದರು.

ನಾಗರಿಕ ಪ್ರಯಾಣಕ್ಕೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿರುವ ಸರ್ಕಾರ ಪ್ರಧಾನಿ ಮೋದಿಯವರಿಂದ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸುತ್ತಲೇ ಇದೆ. ಈ ರೈಲುಗಳ ದರ ಮಧ್ಯಮ ವರ್ಗದವರ ಮೇಲೆ ಹೇರಳವಾಗಿದೆ. ಸಾಮಾನ್ಯ ಜನರಿಗೆ ಅಗತ್ಯಕ್ಕೆ ಅನುಗುಣವಾಗಿ ರೈಲು ಸಂಖ್ಯೆ ಹೆಚ್ಚಿಸಿ , ಜರ್ನಲ್ ಮತ್ತು ಸ್ಲಿಪರ್ರಬೋಗಿಗಳು ಹೆಚ್ಚಿಸುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಬಸವಾನುಯಾಯಿಗಳ ಗೈರು-ವಿರೋಧದ ಮಧ್ಯೆಯೇ ವಿಜಯಪುರದಲ್ಲಿ ‘ವಚನ ದರ್ಶನ’ ಬಿಡುಗಡೆ

ರೈಲ್ವೆ ಸಚಿವ ಅಶ್ವಿನಿ ವೈಷ್ಣವವರಿಗೆ ಸಂಗ್ರಹಿಸಿದ ಸಹಿಗಳ ಪ್ರತಿಯನ್ನು ಸಲ್ಲಿಸಲಾಗುವುದು ಎಂದರು. ರಘು ಪವಾರ, ರಮೇಶ ದೇವಕರ್, ಮಲ್ಲಿಕಾರ್ಜುನ, ಅಜಯ್ ಗುರ್ಜಲ್ಕರ್ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...