ಕಲಬುರಗಿ | ಈರುಳ್ಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಎಐಕೆಎಸ್ ಪ್ರತಿಭಟನೆ

Date:

ಈರುಳ್ಳಿ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಿಸಾನ ಸಭಾ (ಎಐಕೆಎಸ್‌) ಕಲಬುರಗಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು.

ಪ್ರಸ್ತುತ ದೇಶದಲ್ಲಿ ಕೆಲವು ಕಡೆ ಅಕಾಲಿಕ ಮಳೆಯಿಂದಾಗಿ ಹಾಗೂ ಕೆಲವು ಕಡೆ ಬರಗಾಲದ ಕಾರಣಕ್ಕಾಗಿ ಈರುಳ್ಳಿ ಉತ್ಪಾದನೆ ಕಡಿಮೆಯಾಗಿದೆ. ಜನ ಸಾಮಾನ್ಯರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ನಿಷೇಧಿಸಿದೆ. ಆದರೆ, ಇದೇ ಸಂದರ್ಭದಲ್ಲಿ ರೈತರಿಗೆ ಬೆಲೆ ಹೆಚ್ಚಳದ ಲಾಭ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ರೈತರು ಬೆಳೆದ ಈರುಳ್ಳಿ ಮಾರುಕಟ್ಟೆಗೆ ಬರುವ ಸಮಯದಲ್ಲಿಯೇ ರಫ್ತು ನಿಷೇಧಿಸಿದ್ದರಿಂದ ರೈತರಿಗೆ ಸಗಟು ಮಾರುಕಟ್ಟೆಯಲ್ಲಿ ಸಿಗುತ್ತಿರುವ ಉತ್ತಮ ಬೆಲೆ ಕೂಡ ಸಿಗದೇ, ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಹಾಯಕ್ಕಾಗಿ ವೈಜ್ಞಾನಿಕ ರೀತಿಯಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕೆಂದು ಅಖಿಲ ಭಾರತ ಕಿಸಾನ ಸಭಾ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಗಟು ಮಾರುಕಟ್ಟೆಯಲ್ಲಿ ದೇಶದ ಕೆಲವೇ ಕೆಲವು ಮಾಲ್‌ಗಳ ಮಾಲೀಕರು ಈರುಳ್ಳಿಯನ್ನು ಬೆಳೆದ ರೈತರಿಂದ ಕಡಿಮೆ ಬೆಲೆಗೆ ಖರೀದಿಸಿ ಮುಕ್ತ ಮಾರುಕಟ್ಟೆಗೆ ಬಿಡದೇ ದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯೂ ಹೆಚ್ಚಾಗಿದ್ದು ಜನಸಾಮಾನ್ಯರ ಹಿತದೃಷ್ಟಿಯಿಂದ ರಫ್ತು ನಿಷೇಧ ಮಾಡಿದ ಉದ್ದೇಶ ಈಡೇರದೇ ಮಾಲ್‌ಗಳ ಮಾಲೀಕರಿಗೆ ಮಾತ್ರ ಲಾಭವಾಗುತ್ತಿದ್ದು, ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿಕೊಳ್ಳುತ್ತಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಡಾ. ಸ್ವಾಮಿನಾಥನ್ ವರದಿಯ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆ ಘೋಸಿಸಬೇಕೆಂದು ಆಗ್ರಹಿದ್ದಾರೆ.

ಈ ವೇಳೆ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ಮೈಲಾರಿ ಜೋಗೆ, ಮಹಮ್ಮದ್ ರಫಿ, ರುದ್ರವಾಡಿ, ಭೀಮಾಶಂಕರ ಮಾಡಿಯಾಳ, ಸಾಜಿದ ಅಹ್ಮದ ದಿಗ್ಗಾಂವಕರ, ಹಣಮಂತ ಪಡೆರ, ಪದ್ಮಾಕರ ಜಾನಿಬ, ಕಲ್ಯಾಣಿ ಅವಟೆ, ಗಣಜಲಖೇಡ್ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...