ಕಲಬುರಗಿ | ವಿದ್ಯಾರ್ಥಿಗಳ ಪ್ರವೇಶಾತಿ-ವರ್ಗಾವಣೆಗೆ ಲಂಚ ಆರೋಪ; ಅಧಿಕಾರಿ ಅಮಾನತಿಗೆ ಆಗ್ರಹ

Date:

ವಿದ್ಯಾರ್ಥಿಗಳ ಪ್ರವೇಶಾತಿ ಮತ್ತು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ವರ್ಗಾವಣೆ ಕೊಡಿಸಲು ಕಲಬುರಗಿಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಲೆಕ್ಕ ಅಧಿಕ್ಷಕ ಗಂಗಾಧರ ಅವರು ಲಂಚ ಪಡೆದಿದ್ದಾರೆ ಎಂದು ಭೀಮ್‌ ಆರ್ಮಿ ಆರೋಪಿಸಿದೆ. ಅಧಿಕಾರಿ ಗಂಗಾಧರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರವೇಶ ಕೊಡಿಸಲು ಯಳಕಿ ಗ್ರಾಮದ 6ನೇ ತರಗತಿ ವಿದ್ಯಾರ್ಥಿ ಪ್ರದೀಪ ಅವರ ತಂದೆ ಸಿದ್ದಪ್ಪ ಅವರಿಂದ ಗಂಗಾಧರ ಅವರು ಲಂಚ ಪಡೆದಿದ್ದಾರೆ. ‘ಹಣವನ್ನು ನಾನು ಮತ್ತು ನನ್ನ ಮೂವರು ಮೇಲಾಧಿಕಾರಿಗಳು ಹಂಚಿಕೊಳ್ಳಬೇಕು’ ಎಂದು ಅವರೇ ಹೇಳಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಝಳಕಿ ಗ್ರಾಮದ ವಿದ್ಯಾರ್ಥಿನಿ ರಶ್ಮಿತ ಅವರನ್ನು ಮೂರಾರ್ಜಿ ಶಾಲೆಯಿಂದ ಸಾವಳೇಶ್ವರ ವಸತಿ ಶಾಲೆಗೆ ವರ್ಗಾವಣೆ ಮಾಡಲು ಮತ್ತು ಅದೇ ಗ್ರಾಮದ ಮತ್ತೋರ್ವ ವಿದ್ಯಾರ್ಥಿ ಆಶಾ ಅವರನ್ನು ಆಳಂದದ ಅಂಬೇಡ್ಕರ್ ವಸತಿ ಶಾಲೆಗೆ ವರ್ಗಾವಣೆ ಮಾಡಲು ಗಂಗಾಧರ ಲಂಚ ಪಡೆದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಸಮಾಜ ಕಲ್ಯಾಣ ಇಲಾಖೆಯಲ್ಲಿ ಲೆಕ್ಕ ಅಧೀಕ್ಷಕ ಗಂಗಾಧರ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು.
  2. ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಕೋಡ್ತಾ ಕಿತ್ತೂರಾಣಿ ಚನ್ನಮ್ಮ ಬಾಲಕಿಯರ ವಸತಿ ನಿಲಯದಲ್ಲಿ 50 ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ವಸತಿ ನಿಲಯವನ್ನು ಸರಿಯಾಗಿ ನಿರ್ವಹಣೆ ಮಾಡದ ಪ್ರಾಂಶುಪಾಲರು ಮತ್ತು ಮೇಲ್ವಿಚಾರಕರನ್ನು ಅಮಾನತುಮಾಡಬೇಕು.
  3. ಆಳಂದ ತಾಲೂಕಿನ ಕೋರಳ್ಳಿ ತಾಂಡಾದಲ್ಲಿ ವಸತಿ ಶಾಲೆಗೆ ಬೆಡ್, ಊಟದ ವ್ಯವಸ್ಥೆ ಮತ್ತು ಸ್ವಚ್ಛತೆ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಒದಗಿಸಬೇಕು.
  4. ದಲಿತರ ಮೇಲೆ ದೌರ್ಜನ್ಯ ನಡೆದಾಗ ಕೂಡಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಪಂಧಿಸಬೇಕು.
  5. ಅಂತರ್ಜಾತಿ ವಿವಾಹ, ಸಿಂಧುತ್ವ ಪ್ರಮಾಣ ಪತ್ರ, ದೇವದಾಸಿ ಹಾಗೂ ವಿಧವಿಯರ ಮಕ್ಕಳಿಗೆ ಮದುವೆ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದಾಗ ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿರುವ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.
  6. ಆಳಂದ ತಾಲೂಕಿನ ಭುಸನೂರ ಗ್ರಾಮದಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯ ಅಡಿ ದಲಿತರ ಓಣಿಯಲ್ಲಿ ಕಾಮಗಾರಿ ನಡೆಸದೆ, ಪ್ರಬಲ ಜಾತಿಗರ ಓಣಿಯಲ್ಲಿ ಕಾಮಗಾರಿ ಮಾಡಲಾಗಿದೆ. ದಲಿತರ ಹಣವನ್ನು ದುರುಪಯೋಗ ಮಾಡಿಕೊಂಡ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.

ಪ್ರತಿಭಟನೆಯಲ್ಲಿ ಸೂರ್ಯಕಾಂತ ಜಿಡಾಗ, ಅಬ್ದುಲ್ ಗನಿ ರಾವಣ ಸೇರಿದಂತೆ ಹಲವರು ಇದ್ದರು.ಕಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...