ಕಲಬುರಗಿ | ರೋಗಿಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ಆಗ್ರಹ

Date:

ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು ಸಮಪರ್ಕವಾಗಿ ನೀಡದೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿದ್ದಾರೆ.

ಅನಾರೋಗ್ಯ ಕಾರಣ ವಿದ್ಯಾರ್ಥಿ ಆಕಾಶ್ ಸಿಂಧನಮಡು ಎಂಬುವವರು ಸರ್ಕಾರಿ ಆಸ್ಪತ್ರೆಗೆ ಹೋಗಿದ್ದ, ಸಂದರ್ಭದಲ್ಲಿ ವೈದ್ಯರು ಕೆಲವು ಔಷಧಿಗಳನ್ನು ರಶೀದಿಯಲ್ಲಿ ಬರೆದು ನೀಡುತ್ತಾರೆ. ಈ ಔಷಧಿಗಳು ಸರ್ಕಾರಿ ಮೆಡಿಕಲ್‌ನಲ್ಲಿ ಇಲ್ಲವೆಂದು ತಿಳಿದ ಹಿನ್ನೆಲೆ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ನಾಗರಾಜ ಮನ್ನೆಯವರು ಬಳಿ ಔಷಧಿಯ ಬಗ್ಗೆ ವಿಚಾರಿಸಿದಾಗ ನನಗೆ ಕೇಳಬೇಡ ಹೋಗಿ ಡಿಹೆಚ್‌ಓಗೆ ಕೇಳು ಎಂದು ಅಸಡ್ಡೆಯಿಂದ ಉತ್ತರ ನೀಡಿದರೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ | ಮುಂದುವರೆದ ಧರಣಿ ಸತ್ಯಾಗ್ರಹ; ಅತಿವೃಷ್ಟಿ ಹಾನಿಗೆ ಶೀಘ್ರ ಪರಿಹಾರಕ್ಕೆ ಪ್ರಗತಿಪರರ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಹೆಚ್‌ಓ ಅವರನ್ನು ಸಂಪರ್ಕಿಸಿದ ವೇಳೆ ಆಸ್ಪತ್ರೆಯಲ್ಲಿ ಔಷಧಿ ಇರುವ ಬಗ್ಗೆ ಆಡಳಿತ ಅಧಿಕಾರಿ ಬಳಿಯಲ್ಲಿ ಮಾಹಿತಿ ಇರುತ್ತದೆ. ನಮ್ಮ ಬಳಿಯಲ್ಲಿ ಇರುವುದಿಲ್ಲ ಎಂದು ಉತ್ತರ ನೀಡುತ್ತಾರೆ. ಇದರ ಬಗ್ಗೆ ಆಡಳಿತ ಅಧಿಕಾರಿ ಡಾ.ನಾಗರಾಜ ಮನ್ನೆಯವರಿಗೆ ತಿಳಿಸಿದರೆ ಅವರು ಅದಕ್ಕೆ ಸ್ಪಂದನೆ ನೀಡದೇ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಎಂದು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ಆರೋಪಿಸಿದೆ. ಅಧಿಕಾರಿಗಳು ಸಾರ್ವಜನಿಕರ ಪರವಾಗಿ ಇರದೇ ಗೂಂಡಾಗಳಂತೆ ವರ್ತನೆ ಮಾಡುತ್ತಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವ ಜತೆಗೆ ಆಸ್ಪತ್ರೆಗಳಿಗೆ ಸಕಾಲದಲ್ಲಿ ಔಷಧಿಗಳನ್ನು ಒದಗಿಸುವಂತೆ ಆಗ್ರಹಿಸಿದೆ.


ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ಟೂಡೆಂಟ ಅಸೋಸಿಯೇಷನ್‌ನ ಜಿಲ್ಲಾ ಅಧ್ಯಕ್ಷರದ ಸಿದ್ದಾರ್ಥ ಎಂ.ಪಿ., ಉಪಾಧ್ಯಕ್ಷರದ ಮಹೇಶ ದೊಡ್ಡಮನಿ, ಕಾರ್ಯದರ್ಶಿಗಳಾದ ಕಾರ್ತಿಕ ಶೆಟ್ಟಿ, ನಾಗೇಶ್ ಪೂಜಾರಿ, ಆಕಾಶ, ದರ್ಶನ, ರಾಜು, ಬಸವರಾಜ, ಚಂದು, ಪ್ರಭಾಕರ ಇತರರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...