ಕಲಬುರಗಿ | ಅಂಬಿಗರ ಚೌಡಯ್ಯ 904ನೇ ಜಯಂತೋತ್ಸವ; ಅದ್ದೂರಿ ಪುತ್ಥಳಿ ಮೆರವಣಿಗೆ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ʼನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವʼ ಕಾರ್ಯಕ್ರಮವನ್ನು ತಾಲೂಕ ಯುವ ಕೋಲಿ ಸಮಾಜ ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಭವ್ಯ ಪುತ್ಥಳಿಯ ಮೇರವಣಿಗೆ ಮಾಡಿದರು.

ಸಮಾಜದ ಹೆಣ್ಮು ಮಕ್ಕಳು ಕುಂಭ, ಕಳಸಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿದರೆ, ಪುಟ್ಟ ಮಕ್ಕಳು ಅಂಬಿಗರ ಚೌಡಯ್ಯನವರ ಹಾಡಿಗೆ ಕೋಲಾಟ ಆಡುವುದರ ಮೂಲಕ ಗಮನ ಸೆಳೆದರು.

ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಮೆರವಣಿಗೆಯು ಸ್ಟೇಷನ್ ರಸ್ತೆ, ನಾಗಾವಿ ವೃತ್ತ, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಲಾಡ್ಡಿಂಗ್ ಕ್ರಾಸ್ ಹತ್ತಿರ ಇರುವ ಅಂಬಿಗರ ಚೌಡಯ್ಯ ನವರ ವೃತ್ತದಲ್ಲಿ ಕೊನೆಗೊಂಡಿತ್ತು. ಮೆರವಣಿಗೆಯುದ್ದಕ್ಕೂ ಡಿಜೆ ಸೌಂಡ್‌ಗೆ ಯುವಕರು ಕುಣಿದು ಕುಪ್ಪಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದ್ಧೂರಿಯಾಗಿ ನಡೆದ ಅಂಬಿಗರ ಚೌಡಯ್ಯನವರ ಭವ್ಯ ಮೆರವಣಿಗೆಯಲ್ಲಿ ಸಮಾಜದ ಶ್ರೀಗಳಾದ ಮಹಲರೋಜಾ ಮಲ್ಲಿಕಾರ್ಜುನ ಮುತ್ಯಾ, ಹುಬ್ಬಳ್ಳಿಯ ರಾಜಗುರು ಸ್ವಾಮೀಜಿ, ಅಲ್ಲೂರಿನ ಮೌನೇಶ್ವರ ಮಹಾರಾಜ್ ಅವರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಯುವ ಕೋಲಿ ಸಮಾಜದ ತಾಲೂಕು ಗೌರವಾಧ್ಯಕ್ಷ ಶಿವಕುಮಾರ ಸುಣಗಾರ, ಸಮಾಜದ ಯುವ ಪೀಳಿಗೆಯು ದುಶ್ಚಟಗಳಿಗೆ ದಾಸನಾಗದೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಾಮಾಜಿಕವಾಗಿ ಸಮಾಜದ ಏಳಿಗೆಗಾಗಿ ಸಂಘಟಿತರಾಗುವ ಉದ್ದೇಶದಿಂದ ಮಾಡಲಾದ ಭವ್ಯ ಮೆರವಣಿಗೆಯಲ್ಲಿ ತಾಲೂಕಿನ ಎಲ್ಲಾ ಕೋಲಿ ಸಮಾಜದ ಯುವಕರು ಭಾಗವಹಿಸಿರುವುದನ್ನು ನೋಡಿದರೆ ಮುಂದೊಂದು ದಿನ ನಮ್ಮ ಸಮಾಜ ಸರ್ವಾಂಗೀಣ ಅಭಿವೃದ್ಧಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಯುವ ಕೋಲಿ ಸಮಾಜದ ತಾಲೂಕಾಧ್ಯಕ್ಷ ಗುಂಡು ಐನಾಪೂರ ಮಾತನಾಡಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಅಂಬಿಗರ ಚೌಡಯ್ಯನವರ ಪುತ್ಥಳಿಯ ಭವ್ಯ ಮೆರವಣಿಗೆಯಲ್ಲಿ ಸಮಾಜದ ಯುವಕರು ಶಾಂತಿಯುತವಾಗಿ ಮತ್ತು ಆಸಕ್ತಿಯಿಂದ ಭಾಗವಹಿಸದ್ದಾಗಿ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೆನೆ ಎಂದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ರಾಜೇಶ್ ಹೋಳಿಕಟ್ಟಿ, ಶಿವಕುಮಾರ ಸುಣಗಾರ, ಮಲ್ಲಿಕಾರ್ಜುನ ಎಮ್ಮೆನೋರ, ಕಾಶಪ್ಪ ಡೋಣಗಾಂವ, ಮೌನೇಶ ಭಂಕಲಗಿ, ಶಂಕರ ಐನಾಪೂರ, ಮಹೇಶ ಸಾತನೂರ, ಶರಣು ಡೋಣಗಾಂವ, ಅರುಣ ಯಾಗಾಪೂರ, ದೇವರಾಜ ತಳವಾರ, ದೇವು ದಿಗ್ಗಾಂವ, ಬಸ್ಸು ಮೈನಾಳಕ‌ರ್, ಸೋಮು ಐನಾಪೂರ, ಭೀಮಾಶಂಕರ ಹೋಳಿಕಟ್ಟಿ, ಗೂಳಿ ಡಿಗ್ರಿ ಸಂಗಮೇಶ ಯರಗಲ್, ಮಲ್ಲಿಕಾರ್ಜುನ ಅಲ್ಲೂರಕರ್, ಕೃಷ್ಣಾರಾವೂರ, ಆನಂದ ಯರಗಲ್, ಸೇರಿದಂತೆ ಅನೇಕರು ಭಾಗವಹಿಸಿದ್ದರು.ಈ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...