ಕಲಬುರಗಿ | ಹೃದಯಘಾತಕ್ಕೆ ಒಳಗಾದ ವ್ಯಕ್ತಿ ಸಾವು; ಸಿಮೆಂಟ್‌ ಕಾರ್ಖಾನೆ ವಿರುದ್ಧ ಪ್ರತಿಭಟನೆ

Date:

ತೀವ್ರ ಹೃದಯಾಘಾತವಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸೇಡಂ ಪಟ್ಟಣದ ಸಿಮೆಂಟ್ ಕಾರ್ಖಾನೆಗೆ ಗೂಡ್ಸ್ ರೈಲು ತೆರಳಲು ರೈಲ್ವೆ ಗೇಟ್‌ ಹಾಕಿದ ಕಾರಣಕ್ಕೆ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ತಲುಪುವಲ್ಲಿ ವಿಳಂಬವಾಗಿರುವುದರಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸೇಡಂ‌ ಪಟ್ಟಣದ ಪುನರ ಬಜಾರ್ ನಿವಾಸಿ ಮುಕ್ತಾರ ಪಾಷಾ (40) ಮೃತರು. ಮುಕ್ತಾರ್ ಪಾಷಾ ತಾಲ್ಲೂಕು ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಮೆಂಟ್ ವಿಕ್ಷೀಸಲು ತೆರಳಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅಲ್ಲಿದ್ದವರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲಿಂದ ಕಲಬುರಗಿಗೆ ಹೋಗಲು ಹೇಳಿದ್ದರಿಂದ ಆಂಬುಲೆನ್ಸ್‌ನಲ್ಲಿ ತೆರಳುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಿದ್ದಲ್ಲಿ ವ್ಯಕ್ತಿ ಬದುಕುಳಿಯುತ್ತಿದ ಎಂದು ಹೇಳಲಾಗುತ್ತಿದ್ದು, ಸೇಡಂನ ವಾಸವದತ್ತಾ ಸಿಮೆಂಟ್ ಕಾರ್ಖಾನೆಯ ಎದುರು ಬುಧವಾರ ಸಂಜೆ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಕಾರ್ಖಾನೆಯ ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ ಕಾರ್ಖಾನೆ ಹಾಗೂ ರೈಲ್ವೆ ಇಲಾಖೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ ವರದಿಗೆ ಸ್ಪಂದಿಸಿದ ಸಿಎಂ ಕಚೇರಿ : ಸ್ವಚ್ಛವಾದ ಬೀದರ್‌ನ ʼಪಾಪನಾಶ ಕೆರೆʼ

ಮೃತ ಕುಟುಂಬಸ್ಥನ ಮನೆಯಲ್ಲಿ ಒಂದು ಸರ್ಕಾರಿ ನೌಕರಿ ಹಾಗೂ 50 ಲಕ್ಷ ರೂಪಾಯಿ ಪರಿಹಾರ ಹಾಗೂ ವಾಸವದತ್ತಾ ಸಿಮೆಂಟ್ ರೈಲ್ವೆ ಹಳಿ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.

ಸಿಟಿಜನ್ ಜರ್ನಲಿಸ್ಟ್ : ಸುನೀಲ್ ರಾಣಿವಾಲ್ , ಸೇಡಂ,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...