ಕಲಬುರಗಿ | ಮುಳುವಾದ ವಾಟ್ಸಪ್‌ ಸಂದೇಶ: ಮೇಲ್ವಿಚಾರಕಿಯ ನಿಂದನೆಗೆ ಮೂರ್ಛೆ ಹೋದ ಅಂಗನವಾಡಿ ಕಾರ್ಯಕರ್ತೆ!

Date:

ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಅಶೋಕ ನಗರ ಅಂಗನವಾಡಿ ಕೇಂದ್ರದ ಸಂಖ್ಯೆ ಎರಡರ ಕಾರ್ಯಕರ್ತೆಯೋರ್ವರು ಮೇಲ್ವಿಚಾರಕಿಯ ನಿಂದನೆ, ಒತ್ತಡ ತಾಳಲಾರದೆ ಮೂರ್ಛೆ ಹೋದ ಘಟನೆ ಗುರುವಾರ ಸಂಜೆ ನಡೆದಿದೆ.

ಅಂಗನವಾಡಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ವಾಟ್ಸಪ್‌ ಸಂದೇಶದ ವಿಚಾರವಾಗಿ ಮೇಲ್ವಿಚಾರಕಿ ಸಂಗಮ್ಮಾ ಪಾಟೀಲ, ಅಂಗನವಾಡಿ ಕಾರ್ಯಕರ್ತೆ ಗುಜಮ್ಮಾ ಕುರಿ ಅವರಿಗೆ ಬೈದು, ನಿಂದಿಸಿದ್ದರಿಂದ ಹೆದರಿದ ಕಾರ್ಯಕರ್ತೆ, ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದಾರೆ ಎನ್ನಲಾಗಿದೆ.

ಕೂಡಲೇ ಸ್ಥಳದಲ್ಲಿದ್ದ ಸಹೋದ್ಯೋಗಿಗಳು ಅವರನ್ನು ಆಟೋ ಮೂಲಕ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಧ್ಯಮಗಳ ಜೊತೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆ ಗುಜಮ್ಮಾ ಕುರಿ, “ವಾಟ್ಸ್‌ಅಪ್‌ ಸ್ಟೇಟಸ್ ತಪ್ಪಾಗಿ ವಾಟ್ಸಪ್ ಗ್ರೂಪ್‌ಗೆ ಪೋಸ್ಟ್‌ ಮಾಡಿದ್ದನ್ನೇ ನೆಪವಾಗಿ‌ಟ್ಟುಕೊಂಡು ಮೇಲ್ವಿಚಾರಕಿ ಸಂಗಮ್ಮಾ ಪಾಟೀಲ ನಿಂದಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

“ಅಂಗನವಾಡಿ ಕಾರ್ಯಕರ್ತೆರಿಗೆ ಕವಡೆಕಾಸಿನ ಕಿಮ್ಮತ್ತು ನೀಡದೆ, ಅವಮಾನ ಮಾಡಿ ಅಸಭ್ಯವಾಗಿ ವರ್ತಿಸುತ್ತಾರೆ” ಎಂದು ಗುಜಮ್ಮಾ ಕುರಿ ದೂರಿದರು.

ಈ ಮುಂಚೆ ಸಂಗಮ್ಮ ಪಾಟೀಲರವರು ಕಾರ್ಯನಿರ್ವಹಿಸಿದ ನಾಲವಾರ, ಭಂಕೂರನಲ್ಲಿಯೂ ಕೂಡ ಇದೇ ರೀತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜಾತಿ ನಿಂದನೆ, ತಾರತಮ್ಯ ಮತ್ತು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೂಡ ಇದೇ ವೇಳೆ ಕೇಳಿಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...