ಕಲಬುರಗಿ | ಸಮಗ್ರ ಶಿಶು ಅಭಿವೃದ್ಧಿಗೆ ಹಣಕಾಸು ಮೀಸಲಿಡುವಂತೆ ಅಂಗನವಾಡಿ ನೌಕರರ ಸಂಘ ಆಗ್ರಹ

Date:

ಸಮಗ್ರ ಶಿಶು ಅಭಿವೃದ್ಧಿಗಾಗಿ ಹಣಕಾಸು ಮೀಸಲಿಡುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಚಿತ್ತಾಪುರ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“2024-25ರ ಬಜೆಟ್‌ನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸಾಕಷ್ಟು ಹಣಕಾಸು ಹಂಚಿಕೆ ಮೀಸಲಿಡಲು ಅಂಗನವಾಡಿಗಳನ್ನು ಬಲಪಡಿಸಲು ಮತ್ತು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿ

ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸಾಕಷ್ಟು ಹಣ ಮೀಸಲಿಡಬೇಕು. ಅಲ್ಲದೆ ಇತರ ಬೇಡಿಕೆಗಳಾದ, ಮುಂಬರುವ ಬಜೆಟ್‌ನಲ್ಲಿ ಐಸಿಡಿಎಸ್‌ಗೆ ಬಜೆಟ್ ಹಂಚಿಕೆ ಹೆಚ್ಚಿಸಬೇಕು. ಸಂಪೂರ್ಣವಾಗಿ ಮೂಲ ಸೌಕರ್ಯ ಮತ್ತು ಉತ್ತಮ ಗುಣಮಟ್ಟದ ಆಹಾರದೊಂದಿಗೆ ಐಸಿಡಿಸಿ ಯೋಜನೆಯನ್ನು ಬಲಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಗ್ರ ಶಿಶು ಅಭಿವೃದ್ಧಿಗೆ ಆಗ್ರಹ

“ಸಾಕಷ್ಟು ಸಂಪನ್ಮೂಲಗಳೊಂದಿಗೆ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಸಮಯದ ಅಂಗನವಾಡಿಗಳಾಗಿ ಜೊತೆಜೊತೆಗೆ ಪಾಲನಾ ಕೇಂದ್ರ ಆಗಿ ಅಭಿವೃದ್ಧಿಪಡಿಸಬೇಕು. ಅಂಗನವಾಡಿಗಳಲ್ಲಿಯೇ ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ(ಇಸಿಸಿಇ)/ ಶಾಲಾಪೂರ್ವ ಶಿಕ್ಷಣ ಘಟಕಾಂಶಗಳನ್ನು ಬಲಪಡಿಸಬೇಕು. ಶಾಲಾಪೂರ್ವ ಶಿಕ್ಷಣವು ಔಪಚಾರಿಕ ಶಿಕ್ಷಣ ವ್ಯವಸ್ಥೆಯ ಭಾಗವಾಗಿರಲೇಬಾರದು. ಅಂಗನವಾಡಿ ಕೇಂದ್ರಗಳನ್ನು ನೋಡಲ್ ಏಜೆನ್ಸಿಗಳಾಗಿ ಜಾರಿಗೊಳಿಸುವುದರ ಜತೆಗೆ ಇಸಿಸಿಇ ಹಕ್ಕಾಗಬೇಕು” ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಸರ್ಕಾರಿ ನೌಕರರಂತೆ ಖಾಯಂ ಮಾಡಬೇಕು. ಖಾಯಮಾತಿ ವಿಷಯ, 45ನೇ ಐಎಲ್‌ಸಿ ಶಿಫಾರಸಿನ ಪ್ರಕಾರ ತಿಂಗಳಿಗೆ ಕನಿಷ್ಟವೇತನ ₹26000, ಮಾಸಿಕ ಪಿಂಚಣಿ ₹10000, ಪಿಎಫ್, ಇಎಸ್‌ಐ ಇತ್ಯಾದಿ ಭದ್ರತೆ ನೀಡಲು ಕೂಡಲೇ ತೀರ್ಮಾನಿಸಿ ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

“ದೇಶಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಏಕರೂಪದ ಸೇವಾ ಷರತ್ತುಗಳನ್ನು ಜಾರಿಗೆ ತರಬೇಕು. ಎಲ್ಲ ಯೋಜನೆಗಳು ಕಾರ್ಮಿಕರಿಗೆ ಅನ್ವಯವಾಗುವಂತೆ ಕೂಡಲೇ ವೇತನ ಆಯೋಗ ರಚನೆ ಮಾಡಬೇಕು. ಗ್ರಾಚ್ಯುಟಿ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಕ್ಷಣವೇ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

“ಅಂಗನವಾಡಿ ನೌಕರರು ಮತ್ತು ಸಹಾಯಕಿಯರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮತ್ತು ಕಾರ್ಮಿಕ ಸಂಘಟನೆ ಕಟ್ಟಿಕೊಳ್ಳುವ ಹಕ್ಕುಗಳನ್ನು ಗುರುತಿಸಿ ಎಲ್ಲಾ ಹಂತಗಳಲ್ಲಿ ದ್ವಿಪಕ್ಷೀಯ ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸಬೇಕು. ಯಾವುದೇ ರೂಪದಲ್ಲಿ ಐಸಿಡಿಸಿಯನ್ನು ಖಾಸಗೀಕರಣಗೊಳಿಸಬಾರದು. ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಸೇವೆಗಳನ್ನೂ ಕೂಡ ಖಾಸಗೀಕರಣ ಮಾಡಬಾರದು. ಶ್ರಮಿಕರಿಗೆ ಮಾರಕವಾಗಿರುವ ಕಾರ್ಮಿಕ ಸಂಹಿತೆಗಳನ್ನು ತೆಗೆಯಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಅಮಾನತಿಗೆ ಆಗ್ರಹ

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ದೇವಮ್ಮ ಅನ್ನದಾನಿ, ಕಾರ್ಯದರ್ಶಿ ರಾಧಾ ಲಕ್ಕನೋರ್, ಸಂಘದ ಪದಾಧಾಕಾರಿಗಳಾದ ಅಕ್ಕಮಹಾದೇವಿ ಬೃಂಗಿಮಠ್, ರಾಧಾಬಾಯಿ ದಂಡೋತಿ, ಶಾಂತಾ, ಕಾಶಮ್ಮ, ನಿರ್ಮಲಾ, ದೀಪಿಕಾ, ಸುಮಿತ್ರಾ, ಭಾಗಮ್ಮ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರಾದ ಶಾಂತಾಬಾಯಿ ನಾಟಿಕರ್, ಲಕ್ಷ್ಮೀ ನಾಟಿಕಾರ್, ವಿದ್ಯಾನಿಧಿ ಕವಡೆ, ದೇವಿಂದ್ರಮ್ಮ, ವಿಜಯಲಕ್ಮಿ ಸೇರಿದಂತೆ ಬಹುತೇಕರು ಇದ್ದರು.

ವರದಿ: ವಾಲೆಂಟಿಯರ್ ಅನಂತ್ ದೇಶಪಾಂಡೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...