ಕಲಬುರಗಿ ಬಂದ್ | ಇಂದು ಶಾಲಾ-ಕಾಲೇಜುಗಳಿಗೆ ರಜೆ

Date:

ಇತ್ತೀಚೆಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಹೇಳಿಕೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆ ಖಂಡಿಸಿ, ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಇಂದು ವಿವಿಧ ಸಂಘಟನೆಗಳು ಕಲಬುರಗಿ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆ ಕಲಬುರಗಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯಸಭೆಯಲ್ಲಿ ಭಾಷಣ ಮಾಡಿದ್ದ ಕೇಂದ್ರ ಸಚಿವ ಅಮಿತ್ ಶಾ, “ಇತ್ತೀಚೆಗೆ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್…. ಎನ್ನುವುದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ನಾಮ ಜಪಿಸಿದ್ದರೆ ಸ್ವರ್ಗಕ್ಕಾದರೂ ಹೋಗುತ್ತಿದ್ದಿರಿ” ಎಂದು ಹೇಳಿದ್ದರು. ಈ ಹೇಳಿಕೆಯನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿದೆ. ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಕಾಂಗ್ರೆಸ್ ದೇಶದಾದ್ಯಂತ ಅಂಬೇಡ್ಕರ್ ಸಮ್ಮಾನ್ ಮಾರ್ಚ್‌ ನಡೆಸುತ್ತಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಕಲಬುರಗಿಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ಮತ್ತು ವಿವಿಧ ಸಂಘಟನೆಗಳು ಮಂಗಳವಾರ ಬಂದ್‌ಗೆ ಕರೆ ನೀಡಿವೆ.

ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಬೆಳ್ಳಂಬೆಳಗ್ಗೆ ಬಸ್, ಆಟೊ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸಂಘಟನೆಗಳು ಮುಚ್ಚಿಸಿವೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶಾಲೆ

ಇನ್ನು ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಡಿಸೆಂಬರ್ 24ರಂದು ಗದಗದಲ್ಲಿಯೂ ಬಂದ್‌ಗೆ ಕರೆ ನೀಡಿದೆ. ಇನ್ನು ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಇಂದು ಸಂಜೆ 4.30 ಗಂಟೆಗೆ ಅಜ್ಜರಕಾಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...