ಕಲಬುರಗಿ | ‘ಇಷ್ಟು ದಿನ ಎಲ್ಲಿಗೆ ಹೋಗಿದ್ರಿ’ ಎಂದು ಬಿಜೆಪಿ ಸಂಸದರಿಗೆ ಅವರ ಕಾರ್ಯಕರ್ತರಿಂದಲೇ ತರಾಟೆ

Date:

ಸಂಸದರಾದ ಮೇಲೆ ಇಷ್ಟು ದಿನ ಎಲ್ಲಿಗೆ ಹೋಗಿದ್ರಿ. ವಿಧಾನಸಭಾ ಚುನಾವಣೆಯ ಸಮಯದಲ್ಲೂ ಕ್ಷೇತ್ರಕ್ಕೆ ಬರಲಿಲ್ಲ. ಈಗ ಬಂದಿದ್ದೀರಾ ಎಂದು ಸಂಸದ ಡಾ. ಉಮೇಶ್‌ ಜಾಧವ್ ಅವರನ್ನು ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನಗರದಲ್ಲಿ ಶನಿವಾರ ನಡೆದ ಬಿಜೆಪಿ ಜಿಲ್ಲಾ ಪ್ರಬುದ್ಧರ ಸಭೆಯಲ್ಲಿ ಉಮೇಶ್‌ ಜಾಧವ್‌ ಅವರನ್ನು ಬಿಜೆಪಿ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಇತರರನ್ನು ಕಾರ್ಯಕರ್ತರನ್ನು ತಡೆದು, ಸಮಾಧಾನ ಮಾಡಿದ್ದಾರೆ.

ಸಭೆಯಲ್ಲಿ ಮಾತಾಡಿದ ಜಾಧವ್, “ನನ್ನ ಗೆಲುವಿಗೆ ಎಂಎಲ್‌ಸಿ ಎನ್‌ ರವಿಕುಮಾರ್‌ ಅವರ ಶ್ರಮ ಕಾರಣ. ಕಳೆದ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಹಗಲು-ರಾತ್ರಿ ದುಡಿದಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಮಾತಿನಿಂದ ಸಿಡಿಮಿಡಿಗೊಂಡ ಪಕ್ಷದ ಹಿರಿಯ ಕಾರ್ಯಕರ್ತರು, “ನಾವ್ಯಾರು ನಿಮ್ಮ ಪರವಾಗಿ ಕೆಲಸ ಮಾಡಿಲ್ವಾ? ಮತ ಹಾಕಿಲ್ವಾ? ಒಬ್ಬರನ್ನು ಓಲೈಕೆ ಮಾಡಲು ಬಂದಿದ್ದೀರಾ? ಇಷ್ಟು ದಿನ ಎಲ್ಲಿಗೆ ಹೋಗಿದ್ರಿ?” ಎಂದು ಗಲಾಟೆ ಮಾಡಿದ್ದಾರೆ.

ಗಲಾಟೆ ವೇಳೆ ಮಧ್ಯಪ್ರವೇಶಿಸಿದ ಪಕ್ಷದ ಮುಖಂಡರು ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, “ಸಂಸದರ ಭಾಷಣದ ವೇಳೆ ಹೀಗೆ ವರ್ತಿಸಬಾರದು. ಬಿಜೆಪಿಯ ಶಿಸ್ತನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಗದ್ದಲ ನಿಂತ ಬಳಿಕ ಮಾತನಾಡಿದ ಎಂಎಲ್‌ಸಿ ರವಿಕುಮಾರ್, “ಸಂಸದರ ಗೆಲುವಿಗೆ ಎಲ್ಲ ಕಾರ್ಯಕರ್ತರ ಶ್ರಮವಿದೆ. ಅವರ ಗೆಲುವು ಎಲ್ಲ ಕಾರ್ಯಕರ್ತರ ಗೆಲುವು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...