ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಆಕಾಶ ಭೀಮಾಶಂಕರ ವಡ್ಡರ(16) ಮೃತ ಬಾಲಕ ಎಂದು ತಿಳಿದು ಬಂದಿದೆ. ಮೃತ ಬಾಲಕನ ತಂದೆ ಭೀಮಾಶಂಕರ ಅವರು, ನೆಲೋಗಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದೆ.
ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಹತ್ತಿರ ಆಕಾಶ, ತನ್ನ ಸ್ನೇಹಿತರೊಂದಿಗೆ ಹುಣಸೆ ಮರ ಹತ್ತಿ ಹಣ್ಣು ಕೀಳಲು ಯತ್ನಿಸಿದ್ದಾನೆ. ಮರದ ಮೇಲೆ ವಿದ್ಯುತ್ ತಂತಿ ಹಾಯ್ದು ಹೋಗಿದ್ದು, ತಲೆಗೆ ವಿದ್ಯುತ್ ತಂತಿ ತಗುಲಿದ್ದರಿಂದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.





