ಕಲಬುರಗಿ | ʼಸಿದ್ರಾಮುಲ್ಲಾಖಾನ್ʼ ಎಂದು ಸ್ಟೇಟಸ್ ಹಾಕಿದ ಪಿಡಿಒ ವಿರುದ್ಧ ಪ್ರಕರಣ ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ್ ವಿರುದ್ಧ ಪ್ರಕಣ ದಾಖಲಾಗಿದೆ.

ಪಿಡಿಒ ಪ್ರವೀಣಕುಮಾರ್, ಆಗಸ್ಟ್ 21ರಂದು ತಮ್ಮ ಮೊಬೈಲ್ ವಾಟ್ಸಪ್ ಸ್ಟೇಟಸ್‌ನಲ್ಲಿ ʼಸಿದ್ರಾಮುಲ್ಲಾಖಾನ್ʼ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಸ್ಟೇಟಸ್‌ ಇಟ್ಟುಕೊಂಡಿದ್ದನ್ನು ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಗಮನಿಸಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮದ ಮುಖಂಡರಾದ ಮಹಾಲಿಂಗಪ್ಪ ಹರವಾಳ, ಆಳಂದ ತಾಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣ ಪೂಜಾರಿ ಸೇರಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕಲಬುರಗಿ | ಲಂಚ ಪಡೆದ ಕಲಬುರಗಿ ನಗರದ ದಕ್ಷಿಣ ವಿಭಾಗದ ಎಸಿಪಿ ಸೇರಿ ಐವರು ಲೋಕಾಯುಕ್ತ ಬಲೆಗೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...