ಕಲಬುರಗಿ | ಮಠದ ಬಾವಿಗೆ ವಿಷಕಾರಿ ಕ್ರಿಮಿನಾಶಕ ಎಸೆದ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು

Date:

ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಕೋರಣೇಶ್ವರ ವಿರಕ್ತಮಠದ ಬಾವಿಗೆ ವಿಷಕಾರಿ ಕ್ರಿಮಿನಾಶಕ ಔಷಧ ಎಸೆದ ಆರೋಪದಡಿ ಮಠದಿಂದ ವಿಮುಕ್ತಗೊಂಡಿರುವ ಓರ್ವ ಸ್ವಾಮೀಜಿ ಹಾಗೂ ಒಬ್ಬ ಮಹಿಳೆ ವಿರುದ್ಧ ಆಳಂದ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಮಠದಿಂದ ವಿಮುಕ್ತಗೊಂಡಿರುವ ಮುರುಘೇಂದ್ರ ಸ್ವಾಮೀಜಿ (ಚಂದ್ರಶೇಖರಯ್ಯ ಅಸೂಟಿ) ಹಾಗೂ ಅನಿತಾ ಗಣಪತಿ ಎಂಬುವವರ ವಿರುದ್ಧ ಮಠದ ಟ್ರಸ್ಟ್‌ ಸಮಿತಿ ಸದಸ್ಯ ಹಣಮಂತ ಸಾವಳೇಶ್ವರ ನೇತೃತ್ವದಲ್ಲಿ ದೂರು ನೀಡಲಾಗಿತ್ತು. ವಿಮುಕ್ತಗೊಂಡ ನಂತರವೂ ಸ್ವಾಮೀಜಿ ಮಠದ ಹಿಂಬದಿಯ ತಗಡಿನ ಶೆಡ್‌ನಲ್ಲಿ ಉಳಿದುಕೊಂಡಿದ್ದಾರೆ.

ಅಸೂಟಿ ಅವರು ಮಠಕ್ಕೆ ಕೆಟ್ಟ ಹೆಸರು ತರಲು ಈ ಕೃತ್ಯ ಮಾಡಿದ್ದಾರೆ. ಮಠದ ಶಾಲೆಯಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಮಧ್ಯಾಹ್ನದ ಊಟ, ಕುಡಿಯುವ ನೀರಿಗಾಗಿ ಅದೇ ಬಾವಿಯ ನೀರು ಬಳಕೆ ಮಾಡಲಾಗುತ್ತದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟುಮಾಡಿ ಮಠಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ಇದೆ. ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...