ಕಲಬುರಗಿ | ವಾಡಿಯಲ್ಲಿ ಶೋಭಾಯಾತ್ರೆ ವೇಳೆ ಗಲಾಟೆ; ಜ.25ರವರೆಗೆ ನಿಷೇಧಾಜ್ಞೆ

Date:

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದ ಅಂಗವಾಗಿ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ಸೋಮವಾರ ಹಿಂದುತ್ವವಾದಿ ಕೋಮು ಸಂಘಟನೆಗಳು ಶೋಭಾಯಾತ್ರೆ ನಡೆಸಿದ್ದಾರೆ. ಈ ವೇಳೆ, ಶೋಭಾಯಾತ್ರೆಗೆ ಪೊಲೀಸರು ತಡೆಯೊಡ್ಡಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮ, ವಾಡಿಯಲ್ಲಿ 144 ಸೆಕ್ಷನ್‌ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಮೆರವಣಿಗೆ ನಡೆಸಿದ್ದ ಹಿಂದುತ್ವ ಕೋಮು ಕಾರ್ಯಕರ್ತರ ಗುಂಪು, ವಾಡಿಯ ಬಸ್‌ ನಿಲ್ದಾಣದ ಬಳಿಯಿದ್ದ ಮುಖಂಡರ ರೆಸ್ಟೋರೆಂಟ್‌ಗೆ ನುಗ್ಗಿದ್ದಾರೆ. ರೆಸ್ಟೋರೆಂಟ್‌ ಮುಚ್ಚುವಂತೆ ದಾಂಧಲೆ ನಡೆಸಿದ್ದಾರೆ. ಈ ವೇಳೆ, ಮುಸ್ಲಿಂ ಯುವಕರು ಮತ್ತು ಹಿಂದುತ್ವವಾದಿಗಳ ನಡುವೆ ಗದ್ದಲ ಉಂಟಾಗಿದೆ. ಸ್ಥಳಕ್ಕೆ ಬಂಧ ಪೊಲೀಸರು ಎರಡೂ ಗುಂಪನ್ನು ವಾಪಸ್‌ ಕಳಿಸಿದ್ದಾರೆ.

ಆದರೆ, ಸೋಮವಾರ ರಾತ್ರಿ ಮತ್ತೆ ಗದ್ದಲ, ಕಲ್ಲು ತೂರಾಟ ನಡೆದಿದೆ. ಹೀಗಾಗಿ, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಪರಿಣಾಮ, ಚಿತ್ತಾಪುರ ತಹಶೀಲ್ದಾರ್ ಸೈಯದ್ ಷಾಷಾವಲಿ ಅವರು ವಾಡಿಯಲ್ಲಿ ಗುರವಾರದವರೆಗೆ (ಜ.25)  ನಿಷೇಧಾಜ್ಞೆ ಜಾರಿ ಮಾಡಿ, ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಷೇಧಾಜ್ಷೆ ತೆರವುಗೊಳ್ಳುವವರೆಗೂ ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಿಸಲಾಗಿದೆ. ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಗುರುವಾರದವರೆಗೆ ತೆರೆಯದಂತೆ ಆದೇಶಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...