ಕಲಬುರಗಿ | ಒಳಮೀಸಲಾತಿ ವೈಜ್ಞಾನಿಕ ಸಮೀಕ್ಷೆ ತ್ವರಿತ ಮುಗಿಸಿ : ಕೆ.ನೀಲಾ

Date:

ಒಳಮೀಸಲಾತಿಗೆ ಅಗತ್ಯವಾದ ವೈಜ್ಞಾನಿಕ ಸಮೀಕ್ಷೆಯನ್ನು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗದಂತೆ ನೇಮಕಾತಿಗಳನ್ನು ತಡೆಹಿಡಿಯಬೇಕೆಂದು ಸಿಪಿಐ(ಎಂ) ಕಾರ್ಯದರ್ಶಿ ಮಂಡಳಿ ಸದಸ್ಯೆ ಮತ್ತು ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಎಂದು ಆಗ್ರಹಿಸಿದ್ದಾರೆ.

ʼಪರಿಶಿಷ್ಟ ಜಾತಿಗಳ ವೈಜ್ಞಾನಿಕ ವರ್ಗೀಕರಣಕ್ಕೆ ಹೊಸ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಮಾಡಿರುವ ಶಿಫಾರಸ್ಸು ಮುಂದಿನ ದಿನಗಳಲ್ಲಿ ಒಳಮೀಸಲಾತಿಯ ವಿವಿಧ ಪ್ರಶ್ನೆಗಳ ಮೇಲೆ ಕೋರ್ಟ್‌ ಮೆಟ್ಟಿಲೇರುವುದನ್ನು ತಡೆಗಟ್ಟಲು ಅಗತ್ಯವಾಗಿದೆ. ಸುಪ್ರೀಂ ಕೋರ್ಟಿನ ತೀರ್ಪು ಬಹಳ ಮುಖ್ಯವಾಗಿ ಈ ಅಂಶವನ್ನು ಆಧರಿಸಿದೆ. ಆದ್ದರಿಂದ ಆಯೋಗವು ಅಭಿಪ್ರಾಯಪಟ್ಟಿರುವ ಹಾಗೆ ಆಧುನಿಕ ಸಾಧನಗಳನ್ನು ಬಳಸಿ, ಸರ್ಕಾರವು ನಿಗದಿಪಡಿಸಿದ 60 ದಿನಗಳೊಳಗೆ, ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದೆʼ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿ ನಾಗಮೋಹನ ದಾಸ್‌ ಆಯೋಗವು ಮಧ್ಯಂತರ ವರದಿಯನ್ನು ನೀಡಿದೆ. ಸಮಿತಿಯು ಪ್ರಧಾನವಾಗಿ ನಾಲ್ಕು ಶಿಫಾರಸ್ಸುಗಳನ್ನು ನೀಡಿದೆ. ಈ ಶಿಫಾರಸ್ಸುಗಳನ್ನು ರಾಜ್ಯ ಸಚಿವ ಸಂಪುಟವು ಅಂಗೀಕರಿಸಿದೆ. ಆಯೋಗವು ಶಿಫಾರಸ್ಸು ಮಾಡಿರುವ ಹಾಗೇ ಮುಂದಿನ ನೇಮಕಾತಿಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗದ ಹಾಗೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು. ಅದಕ್ಕಾಗಿ ಎರಡು ತಿಂಗಳ ಅವಧಿಗೆ ಪರಿಶಿಷ್ಟ ಜಾತಿಗಳ ಮೀಸಲು ನೇಮಕಾತಿಯನ್ನು ಮುಂದೂಡುವುದು ಅಗತ್ಯವಾಗಿದೆʼ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಒಳ ಮೀಸಲಾತಿ ವಿಚಾರವು ಪ್ರಮುಖ ಹಾಗೂ ಅತ್ಯಂತ ಸಂಕೀರ್ಣವಾದ ಪ್ರಶ್ನೆಯಾಗಿದೆ. ಒಮ್ಮೆ ಜಾರಿಗೊಳಿಸಿದ ನಂತರ, ಸೂಕ್ತ ದತ್ತಾಂಶಗಳ ಕೊರತೆ ಅಥವಾ ಅವೈಜ್ಞಾನಿಕ ಸಮೀಕ್ಷೆ ಇತ್ಯಾದಿ ಕಾರಣಗಳಿಗಾಗಿ ಕೋರ್ಟಿನಲ್ಲಿ ನಕಾರಾತ್ಮಕ ಪರಿಣಾಮ ಉಂಟಾಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಎರಡು ತಿಂಗಳ ಸಮಯದಲ್ಲಿ, ಒಳ ಮೀಸಲಾತಿ ತೀರ್ಮಾನವು ಯಾವುದೇ ಕಾನೂನಿನ ತೊಡಕುಗಳಿಗೆ ಸಿಕ್ಕಿ ತೊಳಲಾಡದಂತೆ ಮಾಡುವ ದೃಷ್ಟಿಯಿಂದ, ವೈಜ್ಞಾನಿಕ ಸಮೀಕ್ಷೆ ಮೂಲಕ ದತ್ತಾಂಶ ಸಂಗ್ರಹ ಮಾಡಲು ಎಲ್ಲ ಶಕ್ತಿಗಳು ಸಹಕಾರ ನೀಡಬೇಕುʼ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...