ಕಲಬುರಗಿ| ಕೊಳಚೆ ನಿರ್ಮೂಲನಾ ಮಂಡಳಿ ಮಂಜೂರು ಮಾಡಿದ ಮನೆಗಳ ಪ್ರಾರಂಭಕ್ಕೆ ಒತ್ತಾಯ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮಂಜುರಾಗಿರುವ ಮನೆಗಳ ಕಾಮಗಾರಿಯನ್ನು ಕೂಡಲೇ ಪುನಾರಂಭ ಮಾಡುವಂತೆ ಒತ್ತಾಯಿಸಿ ತಾಲ್ಲೂಕು ಒಕ್ಕೂಟ ಸಮಿತಿ, ಮಾದಿಗ ದಂಡೋರ, ಮಾದಿಗ ಸಂಘರ್ಷ ಸಮಿತಿ ಒಕ್ಕೂಟದಿಂದ ಪ್ರತಿಭಟನೆ ಮಾಡುವುದರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರದ ಸುತ್ತೋಲೆ ಮತ್ತು ನಿಯಮಾವಳಿಗಳ ಪ್ರಕಾರವೇ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಜೇವರ್ಗಿಯ ಹಲವು ಘೋಷಿತ ಸ್ಲಂ ಬಡಾವಣೆಗಳ ನಿವಾಸಿಗಳಿಗೆ ಮನೆ ಮಂಜೂರು ಮಾಡಿರುತ್ತದೆ. ಸದರಿ ಫಲಾನುಭವಿಗಳು, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಮ್ಮುಖದಲ್ಲಿಯೇ ಮನೆಗಳ ಕಾಮಗಾರಿ ಪ್ರಾರಂಭ ಮಾಡಲಾಗಿರುತ್ತದೆ. ಆದರೆ ಜೇವರ್ಗಿಯ ಸಾಮಾಜಿಕ ಹೋರಾಟಗಾರ ಈರಣ್ಣ ಗೌಡ ಗೊಳ್ಳಾಳ ಅಧಿಕಾರಿಗಳಿಗೆ ಸುಳ್ಳು ದಾಖಲಾತಿ ತೋರಿಸಿ ಮನೆಗಳು ನಿರ್ಮಾಣವಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುತ್ತಾರೆ ಎಂದು ಸಂಘಟನೆಗಳ ಒಕ್ಕೂಟ ಆರೋಪಿಸಿತು.

ಸದರಿ ಫಲಾನುಭವಿಗಳ ಮನೆಗಳು ಈಗಾಗಲೇ ಲಿಂಟಲ್‌, ಸ್ಲ್ಯಾಬ್ ಹಂತದವರೆಗೆ ತಲುಪಿ ಕಾಮಗಾರಿ ಸ್ಥಗಿತಗೊಂಡಿರುತ್ತದೆ. ಸುಮಾರು 2 ತಿಂಗಳಿನಿಂದ ಮನೆಗಳು ಅರ್ಧಕ್ಕೆ ನಿಂತಿರುವ ಕಾರಣ ಫಲಾನುಭವಿಗಳು ಪರದಾಡುವಂತಾಗಿದೆ. ಹಾಗಾಗಿ ಸದರಿ ಮನೆಗಳ ಕಾಮಗಾರಿಯನ್ನು ಕೂಡಲೇ ಪುನಃ ಪ್ರಾರಂಭ ಮಾಡಬೇಕು ಮತ್ತು ಸಂಬಂಧಪಟ್ಟ ಗುತ್ತಿಗೆದಾರರ ಹಣ ಪಾವತಿ ಮಾಡಬೇಕು. ಅಲ್ಲದೆ ಜೇವರ್ಗಿ ಪಟ್ಟಣದ ಎಸ್‌ಸಿ, ಎಸ್‌ಟಿ ಮತ್ತು ಇತರ ಸಮುದಾಯಗಳ ಫಲಾನುಭವಿಗಳಿಗೆ ನ್ಯಾಯ ಒದಗಿಸಿ ಮನೆ ಕಾಮಗಾರಿ ಪ್ರಾರಂಭ ಮಾಡಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಒಕ್ಕೂಟ ಒತ್ತಾಯಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಮನೆಗಳ ಕಾಮಗಾರಿ ಪ್ರಾರಂಭ ಮಾಡದೇ ಇದ್ದಲ್ಲಿ ಸಂಬಂಧ ಪಟ್ಟ ಇಲಾಖೆಯ ಮುಂದೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿತು.

ಈ ಸುದ್ದಿ ಓದಿದ್ದೀರಾ?: ತೊಗರಿಗೆ ಬೆಂಬಲ ಬೆಲೆ ನೀಡುವಂತೆ ರೈತರ ಬೃಹತ್ ಪ್ರತಿಭಟನೆ: ಕಲಬುರಗಿ ಬಂದ್ ಯಶಸ್ವಿ

ಈ ವೇಳೆ ಯಲ್ಲಪ್ಪ ಬಿ ಕೋಟನೂರ, ಮಲ್ಲಿಕಾರ್ಜುನ ಬಿಲ್ಲಾರ, ಮರೆಪ್ಪಾ ಕೋಬಾಳಕರ, ನಾಗರಾಜ ಆಲಗೂರು, ಮಾನಪ್ಪಾ ಬಿ ಗೋಗಿ, ಶಿವಶರಣ ಅಂದೋಲಾ, ಪರಶುರಾಮ ಜಮಖಂಡಿ, ರಾಮು ಬಿಲ್ಲಾದ, ಶಂಕರ ಜೇವರ್ಗಿ, ಕರ್ಣ ಜೇವರ್ಗಿ, ಮಂಜುನಾಥ ಪ್ರಭಾಳಕರ, ಬಾಲರಾಜ ನಾಕಮನ, ರಾಜು ಬಳೊಂಡಗಿ, ಸಿದ್ದಮ್ಮ ಬಡಿಗೇರ, ಮರೆಮ್ಮಾ ಜೇವರ್ಗಿ, ಲಕ್ಷ್ಮೀ ಬಸವರಾಜ, ಸಕರಮ್ಮಾ ನಾಕಮನ, ಶರಣಪ್ಪಾ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...