ಕಲಬುರಗಿ | ಮೇಯ‌ರ್ – ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು

Date:

ಕಲಬುರಗಿ ಮಹಾನಗರ ಪಾಲಿಕೆಯ ಪಾಲಿಕೆ 23ನೇ ಅವಧಿಯ ಮೇಯರ್ – ಉಪಮೇಯ‌ರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ವರ್ಷಾ ಜಾನೆ, ತೃಪ್ತಿ ಲಾಖೆ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಸದಸ್ಯ ವರ್ಷಾ ಜಾನೆ ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ. ಕಾಂಗ್ರೆಸ್‌ನ ತೃಪ್ತಿ ಲಾಖೆ ಅವರಿಗೆ ಉಪ ಮೇಯರ್ ಸ್ಥಾನ ದೊರಕಿದೆ.

ನಗರದ ಇಂದಿರಾ ಗಾಂಧಿ ಸ್ಮಾರಕ ಭವನದಲ್ಲಿ ಗುರುವಾರ ಚುನಾವಣೆ ನಡೆಸಲಾಯಿತು. ಚುನಾವಣಾ ಅಧಿಕಾರಿ, ಕಲಬುರಗಿ ಪ್ರಾದೇಶಿಕ ಆಯುಕ್ತ ಜಹೀರಾ ನಸೀಮ್ ನೇತೃತ್ವದಲ್ಲಿ ಮೇಯ‌ರ್-ಉಪಮೇಯರ್ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದು, ವರ್ಷಾ ಜಾನೆ ಹಾಗೂ ಬಿಜೆಪಿಯ ಗಂಗಮ್ಮ ಮನ್ನೊಳಿ ಸ್ಪರ್ಧಿಗಳಾಗಿದ್ದರು. ಚುನಾವಣೆಯಲ್ಲಿ ಜೆಡಿಎಸ್‌ನ ನಾಲ್ವರು ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರಿಂದ 36 ಮತಗಳೊಂದಿಗೆ ವರ್ಷಾ ಜಾನೆ ವಿಜೇತರಾಗಿದ್ದಾರೆ.

ಇದನ್ನು ಓದಿದ್ದೀರಾ? ತುಮಕೂರು | ಮಹಿಳೆಯ ಕೊಲೆ: ಮೃತದೇಹವನ್ನು ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

27 ಮತಗಳನ್ನು ಪಡೆದುಕೊಂಡಿದ್ದ ಬಿಜೆಪಿ ಅಭ್ಯರ್ಥಿ ಗಂಗಮ್ಮ ಸೋಲನ್ನು ಕಂಡಿದ್ದಾರೆ. ಉಪಮೇಯ‌ರ್ ಸ್ಥಾನಕ್ಕೆ ಮೂರು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಕಾಂಗ್ರೆಸ್‌ನಿಂದ ತೃಪ್ತಿ ಲಾಖೆ, ಜೆಡಿಎಸ್‌ನಿಂದ ವಿಜಯಲಕ್ಷ್ಮಿ ರೆಡ್ಡಿ ಹಾಗೂ ಬಿಜೆಪಿಯಿಂದ ಪಾರ್ವತಿ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ತೃಪ್ತಿ ಲಾಖೆ 33 ಮತಗಳನ್ನು ಪಡೆದು ವಿಜೇತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...