ಕಲಬುರಗಿ | ಸಿದ್ದರಾಮಯ್ಯನವರ ವಿರುದ್ಧ ಷಡ್ಯಂತ್ರ ಆರೋಪ: ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ

Date:

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಮುಡಾ ಪ್ರಕರಣವನ್ನಿಟ್ಟುಕೊಂಡು ಷಡ್ಯಂತ್ರ ರೂಪಿಸಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸೂಚಕ ಸಮುದಾಯಗಳ ಮಹಾ ಒಕ್ಕೂಟದ ಕಲಬುರಗಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ಧರಣಿ ನಿರತರು ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ಹೊರಹಾಕಿದರು.

ಕೇಂದ್ರ ಸರ್ಕಾರದ ಕೈಗೊಂಬೆಯಂತೆ ರಾಜ್ಯಪಾಲರು ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಷಡ್ಯಂತ್ರ ರೂಪಿಸಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿದ್ದಾರೆ. ಈ ಕುತಂತ್ರವನ್ನು ಖಂಡಿಸುತ್ತೇವೆ ಎಂದು ಧರಣಿ ನಿರತರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಸೂಚಕ ಸಮುದಾಯಗಳ ಮಹಾ ಒಕ್ಕೂಟದ ಕಲಬುರಗಿ ಜಿಲ್ಲಾ ಅಧ್ಯಕ್ಷ ಮಹಾಂತೇಶ್ ಎಸ್ ಕೌಲಗಿ, “ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ 136 ಶಾಸಕರನೊಳಗೊಂಡಿರುವ ಸುಭದ್ರ ಸರ್ಕಾರವಾಗಿದೆ. ಈ ದೇಶದಲ್ಲಿ ಕರ್ನಾಟಕವನ್ನು ಅತ್ಯಂತ ಸುಭೀಕ್ಷೆಯಿಂದ ಕೂಡಿರುವ ವಾತಾವರಣ ನಿರ್ಮಾಣ ಮಾಡಿದ್ದಾರೆ. ಇಂತಹ ವಾತಾವರಣ ಹಾಳು ಮಾಡವ ಹುನ್ನಾರ ಮಾಡುತ್ತಿರುವುದು ಪ್ರಧಾನಮಂತ್ರಿ ಮೋದಿ, ಅಮಿತ್ ಶಾ ನೇತೃತ್ವದ ಕೇಂದ್ರ ಸರ್ಕಾರ. ಕೇಂದ್ರ ರಾಜ್ಯಪಾಲರನ್ನು ಕೈಗೊಂಬೆಯಾಗಿರಿಸಿಕೊಂಡು ರಾಜ್ಯ ಬಿಜೆಪಿ, ಜೆಡಿಎಸ್‌ ಷಡ್ಯಂತ್ರ ರೂಪಿಸುತ್ತಿದೆ. ಇದು ಖಂಡನೀಯ” ಎಂದರು.

“ಇದು ಕೇವಲ ಸಿದ್ದರಾಮಯ್ಯ ಅವರಿಗೆ ಮಾಡುವ ಅವಮಾನ ಅಲ್ಲ. ಇಡೀ ರಾಜ್ಯದ ಎಲ್ಲ ಬಡವರು, ಮಹಿಳೆಯರು, ರೈತರು ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಮಾಡುತ್ತಿರುವ ಅವಮಾನ. ಈ ರಾಜ್ಯದಲ್ಲಿ ಹಿಂದುಳಿದ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹೊಟ್ಟೆ ಕೊಚ್ಚಿನಿಂದ ಈ ಕುತಂತ್ರ ಮಾಡುತ್ತಿದ್ದಾರೆ” ಎಂದು ಮಹಾಂತೇಶ್ ಎಸ್ ಕೌಲಗಿ ದೂರಿದರು.

ಈ ವೇಳೆ ಎಸ್ ಟಿ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷೆ ವಾಣಿಶ್ರೀ ಸಗರ್ಕರ್ ಮಾತನಾಡಿ, “ಎಲ್ಲ ವರ್ಗದವರು ಸ್ವ ಇಚ್ಛೆಯಿಂದ ಜಿಲ್ಲಾದ್ಯಂತ ಸಿದ್ದರಾಮಯ್ಯನವರಿಗೆ ಬೆಂಬಲ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ತರುವ ಕೆಲಸ ಮಾಡುತ್ತಿರುವುದು ಹೀನಾಯವಾದ ಕೆಲಸ” ಎಂದು ತಿಳಿಸಿದರು.

photo 6316857459247004519 y

“ಹಿಂದುಳಿದವರ ಮಹಿಳೆ, ಯುವಕರ, ದೀನದಲಿತರು ಎಲ್ಲರ ಪರವಾಗಿ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಯುವನಿಧಿ, ಶಕ್ತಿ ಯೋಜನೆ, ಗೃಹಜ್ಯೋತಿ, ಭಾಗ್ಯ ಲಕ್ಷ್ಮೀ, ಅನ್ನ ಭಾಗ್ಯ ಪಂಚ ಯೋಜನೆಗಳು ಜಾರಿಮಾಡಿ ನುಡಿದಂತೆ ನಡೆದುಕೊಂಡಿದ್ದಾರೆ. ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ, ಆರ್‌ಎಸ್‌ಎಸ್‌ನವರ ಕುತಂತ್ರ ಇಲ್ಲಿ ನಡೆಯುವುದಿಲ್ಲ. ಮೋದಿ, ಅಮಿತ್ ಶಾ ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲ ರಾಜ್ಯ ಬಿಟ್ಟು ಮೊದಲು ತೊಲಗಬೇಕು. ಇಡೀ ರಾಜ್ಯದ ಮಹಿಳೆಯರ ಆಶೀರ್ವಾದ ಸಿದ್ದರಾಮಯ್ಯ ಅವರ ಜೊತೆಗೆ ಇದೆ” ಎಂದು ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಬಸಯ್ಯ ಗುತ್ತೇದಾರ್, ಪವನ್ ಕುಮಾರ್ ವಳಕೇರಿ, ಕುಮಾರ್ ಯಾದವ್, ರೇವಣಸಿದ್ದಪ್ಪ ಸಾತ್ನೂರ್, ಮೆಹಬೂಬ್, ತಾಯ್ಬಣ್ಣ ಹೇಳವರ್, ಶರಣು ಸೂರ್ಯವಂಶಿ ಸೇರಿದಂತೆ ಹಲವಾರು ಮುಖಂಡರು ಧರಣಿ ಸತ್ಯಾಗ್ರಹದಲ್ಲಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...