ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಶವ ಬಾವಿಗೆ ಎಸೆದಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

Date:

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಅಪರಾಧಿಯೋರ್ವನಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ವಿಶೇಷ ಪೋಕ್ಸೊ) ನ್ಯಾಯಾಲಯವು ಗಲ್ಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ಆಳಂದ ತಾಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ (28) ಎಂಬಾತ ಗಲ್ಲು ಶಿಕ್ಷೆಗೊಳಗಾದ ಅಪರಾಧಿ.

2023ರ ಜುಲೈನಲ್ಲಿ ಪುಸ್ತಕ ತರಲು ನಡೆದುಕೊಂಡು ಹೋಗುತ್ತಿದ್ದ 11 ವರ್ಷದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ಗುಂಡೇರಾವ ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ನಂತರ ಉಸಿರುಗಟ್ಟಿಸಿ ಸಾಯಿಸಿ ಶವವನ್ನು ಬಾವಿಗೆ ಎಸೆದಿದ್ದ. ಈ ಕುರಿತು ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ನಿಂಬರ್ಗಾ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದೀಗ ಘನ ನ್ಯಾಯಾಲಯ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ ಗಲ್ಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದೆ. ಕಾನೂನು ಪ್ರಾಧಿಕಾರದಿಂದ ಮೃತ ಬಾಲಕಿಯ ತಾಯಿಗೆ ₹4 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶ ದಲ್ಲಿ ತಿಳಿಸಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ಜಿಲ್ಲೆಯಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆಯಾಗಿದ್ದು ಇದೇ ಮೊದಲ ಪ್ರಕರಣ ಎನ್ನಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕಲಬುರಗಿ | ಪಿಡಿಒ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...